ಸೋಮವಾರಪೇಟೆ, ಮಾ. ೨೨: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ಯಾವುದೇ ಬೆಂಬಲ ದೊರೆಯಲಿಲ್ಲ. ಬಂದ್ ಕರೆಗೆ ಸ್ಥಳೀಯವಾಗಿ ಚೇಂಬರ್ ಆಫ್ ಕಾಮರ್ಸ್ ಸೇರಿದಂತೆ ಯಾವುದೇ ಕನ್ನಡಪರ ಸಂಘಟನೆಗಳು ಬೆಂಬಲ ನೀಡದ ಹಿನ್ನೆಲೆ ಎಂದಿನAತೆ ವ್ಯಾಪಾರ ವಹಿವಾಟು ನಡೆಯಿತು.

ಬೆಳಿಗ್ಗೆಯಿಂದಲೇ ಎಲ್ಲಾ ಅಂಗಡಿ ಮುಂಗಟ್ಟುಗಳು ಎಂದಿನAತೆ ತೆರೆದಿದ್ದವು. ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರವೂ ಅಬಾಧಿತವಾಗಿತ್ತು. ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಎಂದಿನAತೆ ತೆರಳಿದರು. ಜನಜೀವನ ಸಹಜ ಸ್ಥಿತಿಯಲ್ಲಿತ್ತು.