ಶನಿವಾರಸAತೆ, ಮಾ. ೨೨: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹಾಗೂ ಸಂತೆ ಮಾರುಕಟ್ಟೆ ಮುಖ್ಯರಸ್ತೆಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಾಹನ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಮಾಲೀಕರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು.

ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ, ಸೀಟ್ ಬೆಲ್ಟ್ ಧರಿಸದ ಕಾರು ಚಾಲಕರಿಗೆ ಹಾಗೂ ಮದ್ಯಪಾನ ಮಾಡಿ ವಾಹನ ಚಾಲಿಸಿದವರಿಗೆ ದಂಡ ವಿಧಿಸಿ, ಸಂಚಾರ ನಿಯಮ ಪಾಲಿಸುವಂತೆ ಎಚ್ಚರಿಸಿದರು. ಈ ಸಂದರ್ಭ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಡಾ.ಬೆನಕ ಪ್ರಸಾದ್, ಪಿಎಸ್‌ಐ ಎಚ್.ವೈ.ಚಂದ್ರ ಹಾಗೂ ಸಿಬ್ಬಂದಿವರ್ಗದವರು ಹಾಜರಿದ್ದರು.