ಸೋಮವಾರಪೇಟೆ, ಮಾ. ೨೨: ತಾಲೂಕಿನ ಕಿರಗಂದೂರು ಸರಕಾರಿ ಪ್ರೌಢಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜೆ ನಡೆಯಿತು.
ಶಾಲಾ ಮುಖ್ಯ ಶಿಕ್ಷಕರಾದ ರಶ್ಮಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಲು ಮುಂದಾಗಬೇಕೆAದು ಕಿವಿಮಾತು ಹೇಳಿದರು. ಈ ಸಂದರ್ಭ ಶಿಕ್ಷಕರು ಮತ್ತು ಸಿಬ್ಬಂದಿಗಳು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.