ಮಡಿಕೇರಿ, ಮಾ. ೨೬: ಕೊಡವ ಕೌಟುಂಬಿಕ ಹಾಕಿ ಉತ್ಸವ ಈ ಬಾರಿ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು, ಮಡಿಕೇರಿಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ತಾ. ೨೮ರಿಂದ (ನಾಳೆಯಿಂದ) ಪಂದ್ಯಾವಳಿ ಆರಂಭವಾಗಲಿದ್ದು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಉದ್ಘಾಟನೆಗೊಳ್ಳಲಿದೆ. ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿಂದು ಈ ಬಗ್ಗೆ ಮುದ್ದಂಡ ಹಾಕಿ ಉತ್ಸವದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು. ನಾಳೆ ಬೆಳಿಗ್ಗೆ ೯.೪೫ ಗಂಟೆಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಸಾಂಸ್ಕೃತಿಕ ಮೆರವಣಿಗೆ ಪ್ರಾರಂಭವಾಗಲಿದೆ. ಬೆಳಿಗ್ಗೆ ೧೧.೧೫ಕ್ಕೆ ಮೆರವಣಿಗೆ ಮೈದಾನವನ್ನು ತಲುಪಲಿದ್ದು, ೧೧.೩೦ ಗಂಟೆಗೆ ಧ್ವಜಾರೋಹಣ ನಡೆಯಲಿದೆ. ೧೧.೪೫ ಗಂಟೆಗೆ ಸಾಂಸ್ಕೃತಿಕ ಪ್ರದರ್ಶನವಿರಲಿದೆ. ಮಧ್ಯಾಹ್ನ ೧೨.೦೫ ಗಂಟೆಗೆ ಹಾಕಿ ಉತ್ಸವದ ಉದ್ಘಾಟನೆ ನೆರವೇರಲಿದ್ದು, ಮಧ್ಯಾಹ್ನ ೧೨.೩೦ ಗಂಟೆಗೆ ಕೊಡಗು ಜಿಲ್ಲಾಡಳಿತ ಹಾಗೂ ಈ ಮುದ್ದಂಡ ಕುಟುಂಬದ ನಡುವೆ ಮೊದಲ ಪ್ರದರ್ಶನ ಪಂದ್ಯ, ೧.೧೫ ಗಂಟೆಗೆ ಕೊಡವ ಹಾಕಿ ಅಕಾಡೆಮಿ ಘಿI ಹಾಗೂ ಕರ್ನಾಟಕ ಘಿI ತಂಡಗಳ ನಡುವೆ ಎರಡನೇ ಪ್ರದರ್ಶನ ಪಂದ್ಯ ನಡೆಯಲಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮುದ್ದಂಡ ಹಾಕಿ ಉತ್ಸವದ ಗೌರವಾಧ್ಯಕ್ಷರಾದ ಮುದ್ದಂಡ ಬಿ. ದೇವಯ್ಯ ಅಧ್ಯಕ್ಷತೆ ವಹಿಸಲಿದ್ದು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ. ಬೋಪಣ್ಣ ಉಪಸ್ಥಿತರಿರುತ್ತಾರೆ. ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಎಂಎಲ್ಸಿ ಮಂಡೇಪAಡ (ಮೊದಲ ಪುಟದಿಂದ) ಸುಜಾ ಕುಶಾಲಪ್ಪ, ಒಲಿಂಪಿಯನ್ ಡಾ. ಅಂಜಪರವAಡ ಬಿ. ಸುಬ್ಬಯ್ಯ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆ. ಗೌರವ ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕೊಡಗು ವಿವಿಯ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ, ಮಾಜಿ ಸಚಿವ ಮಂಡೇಪAಡ ಅಪ್ಪಚ್ಚು ರಂಜನ್, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಎಂಎಲ್ಸಿಗಳಾದ ಶಾಂತೆಯAಡ ವೀಣಾ ಅಚ್ಚಯ್ಯ, ಮಂಡೇಪAಡ ಸುನಿಲ್ ಸುಬ್ರಮಣಿ, ಚೆಪ್ಪುಡಿರ ಅರುಣ್ ಮಾಚಯ್ಯ ಭಾಗವಹಿಸಲಿದ್ದಾರೆ ಎಂದು ರಶಿನ್ ಸುಬ್ಬಯ್ಯ ವಿವರಿಸಿದರು.

ಈ ಬಾರಿ ಹಾಕಿ ಉತ್ಸವದಲ್ಲಿ ದಾಖಲೆಯ ೩೯೬ ತಂಡಗಳು ಸೆಣೆಸಾಡಲಿವೆ. ೫ಎ ಸೈಡ್ ಮಹಿಳಾ ಹಾಕಿ ಪಂದ್ಯಾಟವನ್ನೂ ಆಯೋಜಿಸಲಾಗುತ್ತಿದ್ದು, ೪೦ ತಂಡಗಳು ಈಗಾಗಲೇ ನೋಂದಾಯಿಸಲ್ಪಟ್ಟಿವೆ. ಏ.೧೦ರವರೆಗೆ ನೋಂದಣಿಗೆ ಅವಕಾಶವಿದೆ. ಏ.೨೫, ೨೬ರಂದು ಸೈಕ್ಲೊತಾನ್ ನಡೆಯಲಿದೆ. ಬೊಡಿ ನಮ್ಮೆಯನ್ನು ಆಯೋಜಿಸಲಾಗುತ್ತಿದೆ.

ಸೆಮಿಫೈನಲ್ ಪಂದ್ಯಕ್ಕೆ ಭಾರತ ಹಾಕಿ ತಂಡದ ಮಾಜಿ ನಾಯಕ ಮನ್‌ಪ್ರೀತ್ ಸಿಂಗ್, ಮತ್ತಿತರರು ಆಗಮಿಸಲಿದ್ದಾರೆ ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು.

ಮುದ್ದಂಡ ಹಾಕಿ ಹಬ್ಬದ ಉಪಾಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿ, ಪಂದ್ಯಾವಳಿ ವೀಕ್ಷಣೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪ್ರೇಮಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಅವರ ಅನುದಾನದಲ್ಲಿ ೧,೫೦೦ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ದಿಲೀಪ್ ನಾಚಪ್ಪ ಹಾಗೂ ಯಾಲದಾಳು ಮನೋಜ್ ಬೋಪಯ್ಯ ಅವರ ಜಾಗದಲ್ಲಿ ೧,೦೦೦ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು ೨,೫೦೦ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಹಾಕಿ ಉತ್ಸವದ ಗೌರವಾಧ್ಯಕ್ಷ ಮುದ್ದಂಡ ಬಿ. ದೇವಯ್ಯ ಮಾತನಾಡಿ, ಮುದ್ದಂಡ ಕಪ್ ಹಾಕಿ ಉತ್ಸವವು ದಸರಾ ಹಬ್ಬದಂತೆ ನಡೆಯಲಿದ್ದು, ಕೊಡವ ಜನಾಂಗ ಹಾಗೂ ಕೊಡವೇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕೆAದರು.

ಮುದ್ದAಡ ಹಾಕಿ ಹಬ್ಬದ ಕಾರ್ಯದರ್ಶಿ ಆದ್ಯ ತಿಮ್ಮಯ್ಯ ಉಪಸ್ಥಿತರಿದ್ದರು.