ಸೋಮವಾರಪೇಟೆ, ಮಾ. ೨೭: ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕೆಶಿಪ್ ಯೋಜನೆಯ ಮೂಲಕ ಮಡಿಕೇರಿಯಿಂದ ಸೋಮ ವಾರಪೇಟೆ ಮಾರ್ಗವಾಗಿ ಸಕಲೇಶ ಪುರದ ದೋಣಿಗಾಲ್ಗೆ ನೂತನ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿರುವುದಕ್ಕೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಲಾಯಿತು.
ಶಾಸಕರ ಕಚೇರಿಯಲ್ಲಿ ಸಮಿತಿಯ ಅಧ್ಯಕ್ಷ ಅರುಣ್ ಕಾಳಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಅರುಣ್, ಈ ಭಾಗದ ಜನರ ಹಲವಾರು ದಶಕಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಗೆ ಬಜೆಟ್ ಅನುಮೋದನೆ ನೀಡಿರುವುದು ಶ್ಲಾಘನೀಯ. ಉದ್ದೇಶಿತ ಸಮಯದಲ್ಲಿ ರಸ್ತೆ ನಿರ್ಮಾಣ ಕಾರ್ಯ ಆರಂಭಗೊAಡು, ಪೂರ್ಣ ಗೊಳ್ಳುವಂತಾಗಲಿ ಎಂದರು.
ಮಡಿಕೇರಿಯಿAದ ದೋಣಿ ಗಾಲ್ವರೆಗೆ ರಸ್ತೆ ನಿರ್ಮಾಣ ವಾದರೆ ಈ ಭಾಗದ ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದೆ.
ರಸ್ತೆ ನಿರ್ಮಾಣ ಸಂಬAಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈಗಾಗಲೇ ಕಾರ್ಯೋನ್ಮುಖವಾಗಿದ್ದು, ಆದಷ್ಟು ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಈ ಸಂದರ್ಭ ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ಎನ್. ದೀಪಕ್, ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಖಜಾಂಚಿ ತ್ರಿಶೂಲ್, ಜೀವನ್, ಹೂವಯ್ಯ ಮಾಸ್ಟರ್, ಜಯರಾಂ, ಉದಯ, ಅನಂತ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.