ವೀರಾಜಪೇಟೆ, ಮಾ. ೨೭: ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ವೀರಾಜಪೇಟೆ ಇವರ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕಿ ಲಲಿತ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಿನ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ.

ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಹೆಣ್ಣುಮಕ್ಕಳ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು.

ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ದೇಶಕರುಗಳ ಸಹಕಾರದಿಂದ ಸಮಾಜ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ತಿçà ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆ ಇಲ್ಲ ಅನ್ನುವುದು ಈಗಾಗಲೇ ಸಾಬೀತಾಗಿದೆ, ಆದರೂ ಪುರುಷ ಪ್ರದಾನ ಸಮಾಜದಲ್ಲಿ ಎಷ್ಟೋ ಪ್ರತಿಭಾನ್ವಿತ ಮಹಿಳೆಯರು ಮೂಲೆಗುಂಪಾಗುತ್ತಿದ್ದಾರೆ. ಆದರೂ ಇಂತಹ ಸಮಾಜದ ಮುಂದೆ ಸಾಧಕ ಮಹಿಳೆಯರನ್ನು ಗುರುತಿಸಿ ಆತ್ಮಸ್ಥೆöÊರ್ಯವನ್ನು ತುಂಬಿಸುವ ಕಾರ್ಯ ನಡೆಯುತ್ತಿದೆ. ಈಗಿನ ಮಹಿಳೆಯರಿಗೆ ಪುರುಷರಿಂದ ಪ್ರೋತ್ಸಾಹ ಇರುವುದರಿಂದ ಮನೆ ಒಳಗೆ ಹೊರಗೆ ಕೆಲಸ ಮಾಡಲು ಉತ್ಸಾಹವಿದೆ ಎಂದರು.

ಸದಸ್ಯರುಗಳಾದ ಮೇರಿ ಸಾಲ್ಡಾನಾ, ಪೊನ್ನಮ್ಮ ಮಹಿಳಾ ದಿನಾಚರಣೆಯ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಇದೇ ಸಂದರ್ಭ ಮುಖ್ಯ ಅತಿಥಿ ಲಲಿತ ಪ್ರಸನ್ನ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ವಿವಿಧ ಮನೊರಂಜನೆ ಹಾಗೂ ಆಟೋಟ ಸ್ಪರ್ಧೆ ನಡೆಯಿತು. ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಸವಿತಾ ವೆಂಕಟೇಶ್, ನಿರ್ದೇಶಕರು ಗಳಾದ ಆಶಾ ಚಿಣ್ಣಪ್ಪ, ಕುಸುಮ ಸೋಮಣ್ಣ, ಬಿ.ಎನ್. ಭಾರತಿ, ಪಿ.ಕೆ. ನೀಲಮ್ಮ, ಪ್ರೇಮ ಮಂಜುನಾಥ, ಲೀಲಾ ಸತೀಶ್, ಮೆಟಿಲ್ಢ ಲೋಬೋ, ಹೆಚ್.ಆರ್. ಪುಷ್ಪ, ಯಶೋಧ ಬಾಬು, ಪುಷ್ಪ ಐತಪ್ಪ, ಪೊನ್ನಮ್ಮ ಹಾಗೂ ಕಾರ್ಯದರ್ಶಿ ಬಿ.ಜಿ. ಪುಷ್ಪಲತಾ ಹಾಗೂ ಸಂಘದ ಸದಸ್ಯರುಗಳು, ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.