ಮಡಿಕೇರಿ, ಮಾ. ೨೭: ೨೦೨೫-೨೬ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೬ನೇ ತರಗತಿಗೆ ಉಚಿತ (ಸಿಬಿಎಸ್‌ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ. ೭೫ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ. ೨೫ ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಅಡಿಯಲ್ಲಿ ಪ್ರಾರಂಭಿಸಲಾಗಿದ್ದು, ಅದರಂತೆ ಸೇವಾ ಸಿಂಧು ಪೋರ್ಟಲ್‌ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ‘ಅಡಿಮಿಷನ್ ಫಾರ್ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್ಸ್’ ಸೇವೆಯ ವೆಬ್‌ಪೋರ್ಟಲ್‌ನಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ ೧೦ ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು ದೂರವಾಣಿ ಸಂಖ್ಯೆ: ೭೬೭೬೪೭೩೭೬೭, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅರ್ಜಿ ಗ್ರಾಮ, ಪೆರಂಬಾಡಿ, ವೀರಾಜಪೇಟೆ ತಾಲೂಕು ದೂರವಾಣಿ ಸಂಖ್ಯೆ: ೮೧೦೫೪೦೯೪೦೫, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂರವಾಣಿ ಸಂಖ್ಯೆ ೯೯೦೦೭೩೧೦೩೭ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.