ಕೂಡಿಗೆ, ಮಾ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಸಮೀಪದ ಕಾಳಿದೇವನ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆಗಾಳಿಗೆ ಗಂಗಮ್ಮ ಎಂಬವರಿಗೆ (ಮೊದಲ ಪುಟದಿಂದ) ಸೇರಿದ ಮನೆಯ ೪೦ಕ್ಕೂ ಹೆಚ್ಚು ಮೇಲ್ಛಾವಣಿಗಳು ಹಾರಿ ಹೋಗಿ ಹಾನಿಯಾಗಿವೆ.

ಸ್ಥಳಕ್ಕೆ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್, ಕಂದಾಯ ಪರಿವೀಕ್ಷಣಾಧಿಕಾರಿ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಅಭಿವೃದ್ಧಿ ಅಧಿಕಾರಿ ಮಂಜಳಾ, ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್. ರವಿ, ರತ್ನಮ್ಮ, ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರವನ್ನು ನೀಡುವ ಭರವಸೆ ನೀಡಿದ್ದಾರೆ.