ಕೋವರ್ ಕೊಲ್ಲಿ ಇಂದ್ರೇಶ್

ಮೈಸೂರು, ಮಾ. ೨೭: ಮಹತ್ವಾಕಾಂಕ್ಷೆಯ ಮೈಸೂರು- ಕುಶಾಲನಗರ ನೂತನ ಚತುಷ್ಪಥ ಹೆದ್ದಾರಿಯ ನಿರ್ಮಾಣ ಸಂಬAಧ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ ೩ ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಬುಧವಾರ ಅನುಮೋದನೆ ನೀಡಿದೆ.

ಈ ಉದ್ದೇಶಿತ ಹೆದ್ದಾರಿ ನಿರ್ಮಾಣವು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕಲ್ಪನೆಯ ಕೂಸಾಗಿದ್ದು ಈ ಹೆದ್ದಾರಿಗೆ ೨೦೨೩ರ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗಾಗಲೇ ಡಿಪಿಆರ್ ಅನ್ವಯ ಭೂಸ್ವಾಧೀನ ಪ್ರಕ್ರಿಯೆ ಮತ್ತು ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಇದೀಗ ಮೂರನೇ ಹಂತದ ಪ್ಯಾಕೇಜ್‌ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಇದು ಕೊಡಗು ಮೈಸೂರಿನ ಪ್ರಯಾಣದ ಅವಧಿಯನ್ನು ಶೇ.೫೦ ರಷ್ಟು ಕಡಿಮೆಗೊಳಿಸಲಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಪ್ರಕಟಿಸಿ ಮಾಹಿತಿ ಹಂಚಿಕೊAಡಿರುವ ಸಂಸದ ಯದುವೀರ್ ಒಡೆಯರ್, ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಯ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ ೩ ನಿರ್ಮಾಣಕ್ಕೆ ಅಂತಿಮವಾಗಿ ಅನುಮೋದನೆ ದೊರೆತಿದೆ. ಇದು ನಮ್ಮ ಪ್ರದೇಶಕ್ಕೆ ಒಂದು ಪ್ರಮುಖ ಮೈಲಿಗಲ್ಲು, ವಿಶೇಷವಾಗಿ ಯೋಜನೆಯು ವರ್ಷಗಳಲ್ಲಿ ಎದುರಿಸಿದ ಹಲವು ವಿಳಂಬಗಳ ನಂತರ. ಇದು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಸ್ಥಿರವಾದ ಅನುಸರಣೆ ಮತ್ತು ದೃಢನಿಶ್ಚಯದ ಪ್ರಯತ್ನಗಳ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ನನ್ನ ಇತ್ತೀಚಿನ ಸಭೆಯಲ್ಲಿ, ಈ ಯೋಜನೆಯ ಸುತ್ತಲಿನ ಸವಾಲುಗಳು ಮತ್ತು ಸಮಸ್ಯೆಗಳನ್ನು ವೈಯಕ್ತಿಕವಾಗಿ ಪ್ರಸ್ತುತಪಡಿಸಲು ಅವಕಾಶ ಸಿಕ್ಕಿತು. ಅವರು ತ್ವರಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು ಮತ್ತು ಭರವಸೆ ನೀಡಿದಂತೆ ಈಗ ಅಗತ್ಯ ಅನುಮತಿಗಳನ್ನು ನೀಡಿದ್ದಾರೆ. ಈ ಹೆದ್ದಾರಿ ಯೋಜನೆಯು ಸಂಪರ್ಕವನ್ನು ಹೆಚ್ಚಿಸುವಲ್ಲಿ, ಪ್ರಯಾಣವನ್ನು ಸುಗಮಗೊಳಿಸುವಲ್ಲಿ ಮತ್ತು ಮೈಸೂರು ಮತ್ತು

(ಮೊದಲ ಪುಟದಿಂದ) ಕೊಡಗಿನ ಆರ್ಥಿಕ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ಬಹಳ ಮಹತ್ವದ್ದಾಗಿದೆ. ನಮ್ಮ ಜನರ ಪ್ರಯೋಜನಕ್ಕಾಗಿ ಇಂತಹ ಪ್ರಗತಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ನಾನು ಸಂಪೂರ್ಣವಾಗಿ ಬದ್ಧನಾಗಿರುತ್ತೇನೆ ಎಂದು ಅವರು ಹೇಳಿದ್ದಾರೆ.

ಮೈಸೂರು ಮತ್ತು ಮಡಿಕೇರಿ ನಡುವಿನ ಅಸ್ತಿತ್ವದಲ್ಲಿರುವ ದ್ವಿಪಥ ರಸ್ತೆಗೆ ಪರ್ಯಾಯವಾಗಿ ೪,೧೨೬ ಕೋಟಿ ರೂ. ವೆಚ್ಚದ ಈ ಯೋಜನೆಯು ಆಧುನಿಕ ನಾಲ್ಕು ಪಥಗಳ ಹೆದ್ದಾರಿಯಾಗಿ ಗೊತ್ತುಪಡಿಸಿದ ರಾಷ್ಟ್ರೀಯ ಹೆದ್ದಾರಿ-೨೭೫ ಆಗಿದೆ. ಅಸ್ತಿತ್ವದಲ್ಲಿರುವ ಹೆದ್ದಾರಿ ಈಗಾಗಲೇ ಭಾರೀ ವಾಹನ ಸಾಂದ್ರತೆ ಹೊಂದಿದ್ದು ಪ್ರಯಾಣದ ಅವಧಿ ಗಣನೀಯವಾಗಿ ಹೆಚ್ಚಾಗಿದೆ. ಕಳೆದ ಮಾರ್ಚ್ ೧೨, ೨೦೨೩ ರಂದು ಮಂಡ್ಯದಲ್ಲಿ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದ್ದರು.

ಭೂಸ್ವಾಧೀನ ಪ್ರಕ್ರಿಯೆಯು ಪೂರ್ಣಗೊಳ್ಳುವ ಹಂತದಲ್ಲಿದೆ - ಪ್ಯಾಕೇಜ್-೨ ಕ್ಕಾಗಿ ಸರಿಸುಮಾರು ಶೇ. ೮೪ ರಷ್ಟು ಭೂಮಿ, ಪ್ಯಾಕೇಜ್-೩ ಕ್ಕಾಗಿ ಶೇ.೮೦ ರಷ್ಟು, ಪ್ಯಾಕೇಜ್-೪ ಗಾಗಿ ಶೇ.೭೦ ರಷ್ಟು ಮತ್ತು ಪ್ಯಾಕೇಜ್-೫ ಕ್ಕಾಗಿ ಶೇ.೮೪ ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಪಿರಿಯಾಪಟ್ಟಣ ಮತ್ತು ಕುಶಾಲನಗರ ನಡುವಿನ ರಸ್ತೆ ಅಗಲೀಕರಣ ಚಟುವಟಿಕೆಗಳು ಅರಣ್ಯ ಇಲಾಖೆಯ ಅನುಮತಿಯನ್ನು ಅವಲಂಬಿಸಿವೆ.

ಮೈಸೂರು ಕುಶಾಲನಗರ ರಾಷ್ಟಿçÃಯ ಹೆದ್ದಾರಿ ಯೋಜನೆ ೨೦೨೭ ರ ಜೂನ್ ತಿಂಗಳ ಮೊದಲು ಪೂರ್ಣಗೊಳ್ಳಲಿದೆ ಎಂದು ಇತ್ತೀಚೆಗೆ ಯದುವೀರ್ ಹೇಳಿದ್ದರು. ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್‌ಗೆ ಅನುಮೋದನೆ ದೊರೆತಿರುವುದು ಕಾಮಗಾರಿಯ ವೇಗವನ್ನು ಹೆಚ್ಚಿಸುವ ನಿರೀಕ್ಷೆ ಇದೆ.

ನಿರೀಕ್ಷೆಯಂತೆ ಕಾಮಗಾರಿ ನಡೆದರೆ ೨೦೨೭ ರ ಅಂತ್ಯದೊಳಗೆ ಈ ಹೆದ್ದಾರಿ ಓಡಾಟಕ್ಕೆ ಸಿದ್ದವಾಗಲಿದ್ದು ಇದು ಎರಡೂ ಬದಿಯಲ್ಲಿ ಸರ್ವೀಸ್ ರಸ್ತೆ ಹೊಂದಲಿದೆ. ಇದು ಮಡಿಕೇರಿ-ಮೈಸೂರು ನಡುವಿನ ಪ್ರಯಾಣದ ಅವಧಿಯನ್ನು ಹಾಲಿ ಮೂರುವರೆ ಗಂಟೆಯಿAದ ಎರಡು ಗಂಟೆಗೆ ಇಳಿಸಲಿದೆ.