ಬ್ಯಾಂಕಾಕ್, ಮಾ. ೨೮: ಶುಕ್ರವಾರ ಬ್ಯಾಂಕಾಕ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಟ ೩ ಸಾವು ಸಂಭವಿಸಿದ್ದು, ೯೦ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಥಾಯ್ಲೆAಡ್ನಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ ೭.೭ರಷ್ಟು ದಾಖಲಾಗಿದೆ.
ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ ೬.೪ ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ ೩೦ ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದಿದೆ. ಇಲ್ಲಿ ಕನಿಷ್ಟ ೩ ಮಂದಿ ಸಾವಿಗೀಡಾಗಿ ೯೦ ಮಂದಿ ನಾಪತ್ತೆಯಾಗಿದ್ದಾರೆ. ಅಂತೆಯೇ ಇಲ್ಲಿಯವರೆಗೆ ಏಳು ಜನರನ್ನು ರಕ್ಷಿಸಲಾಗಿದೆ ಎಂದು ಹೇಳಲಾಗಿದೆ.
ಬ್ಯಾಂಕಾಕ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ೩೦ ಅಂತಸ್ತಿನ ಕಟ್ಟಡವು ಕುಸಿದಿದ್ದು ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನು ಭೂಕಂಪದ ಪರಿಣಾಮವಾಗಿ ಥಾಯ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರಾ ಬ್ಯಾಂಕಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.