ನೇಪಿಡಾವ್ (ಮ್ಯಾನ್ಮಾರ್), ಮಾ. ೨೯: ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ.

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟ ವರ ಸಂಖ್ಯೆ ಸುಮಾರು ೧೦೦೦ಕ್ಕೆ ಏರಿಕೆಯಾಗಿದ್ದು, ೨ ಸಾವಿರಕ್ಕೂ ಅಧಿಕ ಜನರು ಗಾಯ ಗೊಂಡಿದ್ದಾರೆ ಎಂದು ದೇಶದ ಆಡಳಿತಾರೂಢ ಜುಂಟಾ ಸರ್ಕಾರ ಇಂದು ತಿಳಿಸಿದೆ.

ನಿನ್ನೆ ಮಧ್ಯ ಮ್ಯಾನ್ಮಾರ್‌ನ ಸಾಗೈಂಗ್ ನಗರದ ವಾಯುವ್ಯಕ್ಕೆ ೭.೭ ತೀವ್ರತೆಯ ಭೂಕಂಪ ಸಂಭವಿಸಿದ್ದು, ದೇಶದ ದೊಡ್ಡ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ, ಇದು ಭೂಕಂಪದ ಕೇಂದ್ರಬಿAದುವಿಗೆ ಹತ್ತಿರದಲ್ಲಿದ್ದು, ಪ್ರಕೃತಿ ವಿಕೋಪದಿಂದ ಭಾರೀ ವಿನಾಶ ಕಂಡಿದೆ.

ಮAಡಲೇ ಪ್ರದೇಶದ ವೊಂದರಲ್ಲಿಯೇ ಭೂಕಂಪಕ್ಕೆ ೬೯೪ ಮಂದಿ ಮೃತಪಟ್ಟಿದ್ದು, ೧,೬೭೦ ಜನರು ಗಾಯಗೊಂಡಿದ್ದಾರೆ ಎಂದು ಜುಂಟಾ ಮಾಹಿತಿ ತಂಡ ಹೇಳಿಕೆಯಲ್ಲಿ ತಿಳಿಸಿದೆ.

ಥೈಲ್ಯಾಂಡ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಬ್ಯಾಂಕಾಕ್ ಮತ್ತು ಥೈಲ್ಯಾಂಡ್‌ನ ಇತರ ಭಾಗಗಳಲ್ಲಿ ಪ್ರಬಲ ಭೂಕಂಪನಗಳು ದಾಖಲಾದ ನಂತರ, ಥಾಯ್ ಅಧಿಕಾರಿಗಳ ಸಮನ್ವಯ ದೊಂದಿಗೆ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇಲ್ಲಿಯವರೆಗೆ, ಯಾವುದೇ ಭಾರತೀಯ ನಾಗರಿಕರಿಗೆ ತೊಂದರೆಯಾದ ಬಗ್ಗೆ ವರದಿಯಾಗಿಲ್ಲ. ಯಾವುದೇ ತುರ್ತು ಸಂದರ್ಭದಲ್ಲಿ, ಥೈಲ್ಯಾಂಡ್ ನಲ್ಲಿರುವ ಭಾರತೀಯ ಪ್ರಜೆಗಳು ತುರ್ತು ಸಂಖ್ಯೆ +೬೬ ೬೧೮೮೧೯೨೧೮ ನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಚಿಯಾಂಗ್ ಮಾಯ್‌ನಲ್ಲಿರುವ ದೂತಾವಾಸದ ಎಲ್ಲಾ ಸದಸ್ಯರು ಸುರಕ್ಷಿತವಾಗಿದ್ದಾರೆ ಎಂದು ರಾಯಭಾರ ಕಚೇರಿ ಎಕ್ಸ್ ಖಾತೆಯಲ್ಲಿ ತಿಳಿಸಿದೆ.