ಮಡಿಕೇರಿ, ಮಾ. ೨೯: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷಿಕರ ಐನ್‌ಮನೆ ಐಸಿರಿ ಕಾರ್ಯಕ್ರಮ ತಾ. ೩೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಆಲೆಟ್ಟಿ ಗ್ರಾಮದ ಕುಡೆಕಲ್ಲು ಐನ್‌ಮನೆಯಲ್ಲಿ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕುಡೆಕಲ್ಲು ಕುಟುಂಬದ ಹಿರಿಯರಾದ ಸಾವಿತ್ರಿ ರವೀಂದ್ರನಾಥ್ ಕುಡೆಕಲ್ಲು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕಡೆಕಲ್ಲು ಕುಟುಂಬದ ಯಜಮಾನ ಕೆ.ಎಲ್. ರಾಮಣ್ಣ ಗೌಡ, ಆಲೆಟ್ಟಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಅಕ್ರಮ-ಸಕ್ರಮ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರದ ಸದಸ್ಯೆ ಗೀತಾ ಕೋಲ್ಚಾರ್, ಕುಡೆಕಲ್ಲು ಐನ್‌ಮನೆ ಮಾಜಿ ಆಡಳಿತದಾರರಾದ ವಾಸುದೇವ ಗೌಡ, ಸುಳ್ಯ ಗೌಡರ ಯುವ ಸೇವಾ ಸಂಘದ ಉಪಾಧ್ಯಕ್ಷರಾದ ಯತಿರಾಜ ಭೂತಕಲ್ಲು, ಮುತ್ತಾರುಮುಡಿ ಕುಟುಂಬದ ಯಜಮಾನರು ಕುಡೆಕಲ್ಲು ಅಪ್ಪಾಜಿ, ಆಲೆಟ್ಟಿ ಗ್ರಾಮ ಗೌಡ ಸಮಿತಿ ಅಧ್ಯಕ್ಷರಾದ ಸತೀಶ್ ಕೊÊಂಗಾಜೆ, ಬಿಪಿನ್ ಕುಡೆಕಲ್ಲು, ನಿವೃತ್ತ ದೈಹಿಕ ಶಿಕ್ಷಕರಾದ ಅಚ್ಚುö್ಯತ ಮಾಸ್ಟ್ç ನಾರ್ಕೋಡು ಇತರರು ಪಾಲ್ಗೊಳ್ಳಲಿದ್ದಾರೆ.