ಪಾಲಿಬೆಟ್ಟ, ಮಾ.೨೯ : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ - ೨ ಕ್ರಿಕೆಟ್ ಪಂದ್ಯಾವಳಿ ಏ. ೧ ರಿಂದ ಏ. ೧೩ ರವರೆಗೆ ಪಾಲಿಬೆಟ್ಟದಲ್ಲಿ ನಡೆಯಲಿದೆ.
ಪಾಲಿಬೆಟ್ಟದ ಟಾಟಾ ಕಾಫಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯.೩೦ ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಟಾಟಾ ಕಾಫಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಪಿ.ಎ. ಮಂದಣ್ಣ, ಕೂರ್ಗ್ ಎಜುಕೇಶನ್ ಫಂಡ್‌ನ ಅಧ್ಯಕ್ಷ ಸಿ.ಎ. ಮುತ್ತಣ್ಣ, ಟಾಟಾ ಕಾಫಿ ಲಿಮಿಟೆಡ್ ನ ಹಿರಿಯ ಪ್ರಧಾನ ವ್ಯವಸ್ಥಾಪಕ ಕೆ.ಜಿ. ರಾಜೀವ್, ಕಾಫಿ ಲಿಮಿಟೆಡ್‌ನ ಅರಣ್ಯ ಸಂಪನ್ಮೂಲ ನಿರ್ವಹಣೆಯ ಪ್ರಧಾನ ವ್ಯವಸ್ಥಾಪಕ ಬಿ.ಜಿ. ಪೊನ್ನಪ್ಪ, ಕಾಫಿ ಲಿಮಿಟೆಡ್‌ನ ಹೆಚ್‌ಆರ್ ಮತ್ತು ಐಆರ್‌ನ ಉಪ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಮ್ಯಾಥ್ಯು ಉಪಸ್ಥಿತರಿರಲಿದ್ದಾರೆ ಎಂದು ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ.
ಕಳೆದ ಬಾರಿ ೧೬೦ ಆಟಗಾರರು ಪಾಲ್ಗೊಂಡಿದ್ದು, ಈ ಬಾರಿ ೧೭೫ಕ್ಕೂ ಅಧಿಕ ಕ್ರೀಡಾಪಟುಗಳು ಆಡಲಿದ್ದಾರೆ. ಏ.೧ ರಿಂದ ೧೩ ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ನೇರ ಪ್ರಸಾರ ಕೂಡ ಇರುತ್ತದೆ. ಪ್ರತಿದಿನ ಎರಡು ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕೊಡಗು, ಮೈಸೂರು, ಮಂಗಳೂರು, ಚೆನ್ನೆöÊ, ಪಾಂಡಿಚೇರಿ ಸೇರಿದಂತೆ ಉತ್ತರ ಭಾರತದ ಪ್ರತಿಷ್ಠಿತ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಸೀಸನ್-೨ರ ವಿಜೇತರಿಗೆ ಪ್ರಥಮ ಬಹುಮಾನ ೨ ಲಕ್ಷ, ದ್ವಿತೀಯ ೧ ಲಕ್ಷ, ತೃತೀಯ ೫೦ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು ಎಂದರು.
ಕಳೆದ ವರ್ಷ ಮಡಿಕೇರಿಯಲ್ಲಿ ನಡೆಸಿದ ಸಿಸನ್ ೧ರ ಸಫಲತೆಯನ್ನು ಪರಿಗಣಿಸಿ ಟಾಟಾ ಕಾಫಿ ಸಂಸ್ಥೆ ಸೀಸನ್ ೨ ಪಂದ್ಯಾವಳಿಯನ್ನು ನಡೆಸಲು ಮೈದಾನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಕೊಡಗಿನ ಕ್ರೀಡಾ ಪ್ರತಿಭೆಗಳು ಲೆದರ್ ಬಾಲ್ ಕ್ರಿಕೆಟ್ ನಲ್ಲಿ ತೊಡಗಿಸಿಕೊಂಡರೆ ಉತ್ತಮ ಭವಿಷ್ಯವಿದೆ. ಈ ಕಾರಣಕ್ಕಾಗಿಯೇ ಕೂರ್ಗ್ ಕ್ರಿಕೆಟ್ ಫೌಂಡೇಶನ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಉತ್ತೇಜನ ನೀಡುತ್ತಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಫೌಂಡೇಶನ್ ನ ಉಪಾಧ್ಯಕ್ಷ ಪಾಲಚಂಡ ಜಗನ್ ಉತ್ತಪ್ಪ, ಪಂದ್ಯಾವಳಿಯ ಸಂಚಾಲಕ ಚಂಡೀರ ರಚನ್ ಚಿಣ್ಣಪ್ಪ, ವ್ಯವಸ್ಥಾಪಕ ಚೆರುಮಂದAಡ ಸೋಮಣ್ಣ, ನಿರ್ದೇಶಕರಾದ ಮಡ್ಲಂಡ ದರ್ಶನ್ ಪೆಮ್ಮಯ್ಯ, ಕೀತಿಯಂಡ ಗಣಪತಿ, ಅಣ್ಣಳಮಾಡ ರಾಯ್ ಚಿಣ್ಣಪ್ಪ, ಕುಲ್ಲೇಟಿರ ಶಾಂತ ಕಾಳಪ್ಪ, ಬಲ್ಲಂಡ ರೇಣ, ಮತ್ತಿತರರು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗೆ ೯೯೪೫೧೨೨೯೫೨, ೯೬೮೬೧೦೭೨೯೭ ಸಂಪರ್ಕಿಸಬಹುದಾಗಿದೆ.