ಮಡಿಕೇರಿ, ಮಾ. ೨೯: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಂಘಟನೆ ವತಿಯಿಂದ ಸಂಘಟನೆಯ ವಿವಿಧ ಬೇಡಿಕೆಗಳ ಪುನರುಚ್ಚಾರದೊಂದಿಗೆ ಕೊಡವ ಜನಾಂಗಕ್ಕೆ ಪ್ರತ್ಯೇಕ ಲೋಕಸಭಾ ಸ್ಥಾನ ಹಾಗೂ ವಿಧಾನಸಭಾ ಸ್ಥಾನ ಕಲ್ಪಿಸುವಂತೆ ಆಗ್ರಹಿಸಿ ಜನಜಾಗೃತಿ ಸಭೆಗಳನ್ನು ನಡೆಸಲಾಗುತ್ತಿದೆ. ಇದರಂತೆ ತಾ. ೩೧ರಂದು (ನಾಳೆ) ಬೆ. ೧೧ಕ್ಕೆ ಬಿರುನಾಣಿಯಲ್ಲಿ ಹೋರಾಟ ಹಮ್ಮಿಕೊಂಡಿರುವುದಾಗಿ ಸಂಘಟನೆ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ತಿಳಿಸಿದ್ದಾರೆ.