ಮಡಿಕೇರಿ, ಮಾ. ೩೧: ಇಲ್ಲಿನ ಕಾನ್ವೆಂಟ್ ರಸ್ತೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ ೧೯ನೇ ವರ್ಷದ ವಾರ್ಷಿಕೋತ್ಸವ ತಾ. ೨ ರಂದು ನಡೆಯಲಿದೆ.
ಅಂದು ಬೆಳಿಗ್ಗೆ ೮.೩೦ ಗಂಟೆಯಿAದ ಗುರು ಗಣಪತಿ ಪೂಜೆ, ಪುಣ್ಯಾಹ, ನಾಂದಿ, ಸಂಕಲ್ಪ, ಗಣಪತಿ ಹೋಮ, ತತ್ವಕಲಾ ಹೋಮ, ಪೂರ್ಣಾಹುತಿ, ಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ರಾಷ್ಮಾಶೀರ್ವಾದ ನಡೆಯಲಿದೆ. ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ ಎಂದು ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.