ವೀರಾಜಪೇಟೆ, ಏ. ೧: ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಪೆರುಂಬಾಡಿಯಲ್ಲಿರುವ ಘನತಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಸವಿಲೇವಾರಿ ಘಟಕದ ಹಲವು ನ್ಯೂನ್ಯತೆಗಳ ಬಗ್ಗೆ ಈ ಹಿಂದೆ ಶಾಸಕರಿಗೆ ದೂರು ಬಂದ ಹಿನ್ನೆಲೆಯಲ್ಲಿ ಪೆರುಂಬಾಡಿಗೆ ಭೇಟಿ ನೀಡಿದ ಶಾಸಕರು ಸ್ಥಳ ಪರಿಶೀಲನೆಯನ್ನು ಮಾಡಿ ಅಧಿಕಾರಿಗಳಿಂದ ಹಾಗೂ ಸ್ಥಳೀಯರಿಂದ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ಪುರಸಭಾ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಪುರಸಭಾ ಸದಸ್ಯರು, ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.