ಜನಗಣತಿಯೊಂದಿಗೆ ಜಾತಿಗಣತಿ ನಡೆಸುವಂತೆ ಖರ್ಗೆ ಒತ್ತಾಯ

ನವದೆಹಲಿ, ಏ. ೧: ೧೦ ವರ್ಷಗಳಿಗೊಮ್ಮೆ ನಡೆಸುವ ಜನಗಣತಿ ಮತ್ತು ಜಾತಿಗಣತಿಯನ್ನು ತಕ್ಷಣವೇ ಪ್ರಾರಂಭಿಸಬೇಕು. ವಿಳಂಬದಿAದಾಗಿ ಹೆಚ್ಚಿನ ಸಂಖ್ಯೆಯ ಜನರು ಕಲ್ಯಾಣ ಯೋಜನೆಗಳಿಂದ ಹೊರಗುಳಿಯುತ್ತಿದ್ದಾರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸದನದಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ೧೮೮೧ ರಿಂದ ಭಾರತ ಪ್ರತಿ ೧೦ ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸುತ್ತಿದೆ. ಯುದ್ಧಗಳು, ತುರ್ತು ಪರಿಸ್ಥಿತಿಗಳು ಅಥವಾ ಇತರ ಬಿಕ್ಕಟ್ಟುಗಳ ಸಮಯದಲ್ಲಿಯೂ ಸಹ ಇದನ್ನು ನಡೆಸಲಾಗಿದೆ ಎಂದರು. ೧೯೩೧ರಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ನಡೆಸಲಾಗುತ್ತಿತ್ತು. ೧೯೩೧ರ ಜನಗಣತಿಗೆ ಸ್ವಲ್ಪ ಮೊದಲು, ಮಹಾತ್ಮಾ ಗಾಂಧಿಯವರು ನಮ್ಮ ಆರೋಗ್ಯದ ಸ್ಥಿತಿಗತಿ ತಿಳಿಯಲು ನಿಯಮಿತ ವೈದ್ಯಕೀಯ ತಪಾಸಣೆಗಳಂತೆಯೇ, ಜನಗಣತಿಯು ಒಂದು ರಾಷ್ಟçಕ್ಕೆ ಅತ್ಯಂತ ಮುಖ್ಯವಾದ ತಪಾಸಣೆಯಾಗಿದೆ ಎಂದು ಹೇಳಿದ್ದರು ಎಂದು ಖರ್ಗೆ ತಿಳಿಸಿದರು.

ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ಹೋರಾಡಲಿ: ಲಕ್ಷಿö್ಮÃ ಹೆಬ್ಬಾಳ್ಕರ್

ಬೆಳಗಾವಿ, ಏ. ೧: ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಹೊರೆ ಮಾಡಿದೆ. ಕರ್ನಾಟಕ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕÀರ್ ಹೇಳಿದರು. ಕೇಂದ್ರವು ಇಂಧನ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳನ್ನು ಏರಿಸಿದೆ. ನಾವು ಹಾಲಿನ ದರ ಏರಿಸಿದ್ದೇವೆ. ಇದರಿಂದ ರೈತರಿಗೆ ಅನುಕೂಲ ಆಗಲಿದೆ ಎಂದು ಅವರು ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ. ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ತೆರಿಗೆ ಪಾಲು ಕೊಡಿಸಲಿ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಅದನ್ನು ಮರೆತು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಹಾಸ್ಯಾಸ್ಪದ ವಾಗುತ್ತದೆ ಎಂದರು. ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಹಣ ಬಿಡುಗಡೆ ಮಾಡಿ ಎಂದು ನಮ್ಮನ್ನು ಕೇಳುತ್ತಿದ್ದಾರೆ ಎಂದೂ ತಿರುಗೇಟು ನೀಡಿದರು.

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರನ್ಯಾ

ಬೆಂಗಳೂರು, ಏ. ೧: ಸುಮಾರು ೧೫ ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ೬೪ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದಕ್ಕು ಮುನ್ನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ರನ್ಯಾ ರಾವ್ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಶಾಸಕರ ಅಮಾನತು ಮರುಪರಿಶೀಲಿಸುವಂತೆ ಯತ್ನಾಳ್ ಪತ್ರ

ಬೆಂಗಳೂರು, ಏ. ೧: ವಿಧಾನಸಭೆಯಿಂದ ಬಿಜೆಪಿಯ ೧೮ ಶಾಸಕರ ಅಮಾನತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ವಿಧಾನಸಭೆಯ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳೆರಡೂ ಆರೋಗ್ಯಕರ ಚರ್ಚೆಗಳು ನಿರ್ಣಾಯಕ ಪಾತ್ರವಹಿಸುತ್ತವೆ. ವಿಧಾನಸಭೆ ಆವರಣದಲ್ಲಿ ನಡೆದ ಪ್ರತಿಭಟನೆಗಳು ಜನರ ಧ್ವನಿಯನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಕರ್ತವ್ಯದ ಅಭಿವ್ಯಕ್ತಿಯಾಗಿತ್ತು. ಸದನದಲ್ಲಿ ಸಭ್ಯತೆ ಕಾಪಾಡಿಕೊಳ್ಳುವುದು ಮುಖ್ಯ. ಆದರೆ, ಅಮಾನತುಗೊಂಡಿರುವ ೧೮ ಶಾಸಕರ ಪೈಕಿ ಬಹುತೇಕರು ಮೊದಲ ಬಾರಿಗೆ ಶಾಸಕರಾಗಿರುವವರಿದ್ದಾರೆ. ಇದು ಕಠಿಣ ಕ್ರಮವೆಂದು ತೋರುತ್ತದೆ. ಈ ದೀರ್ಘಾವಧಿಯ ಅಮಾನತು ಅವರು ಸೇವೆ ಸಲ್ಲಿಸುವ ಕ್ಷೇತ್ರಗಳ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರುವುದಲ್ಲದೆ, ಪ್ರಜಾಸತ್ತಾತ್ಮಕ ಸಂಸ್ಥೆಯಲ್ಲಿ ಒಂದು ಪೂರ್ವನಿದರ್ಶನವನ್ನು ಕೂಡ ಹೊಂದಿಸುತ್ತದೆ, ಅಲ್ಲಿ ಭಿನ್ನಾಭಿಪ್ರಾಯ ಮತ್ತು ಚರ್ಚೆಯನ್ನು ಹುಟ್ಟುಹಾಕುವ ಬದಲು, ಮೌನಗೊಳಿಸಲು ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ

ನವದೆಹಲಿ, ಏ. ೧: ತೈಲ ಮಾರುಕಟ್ಟೆ ಕಂಪೆನಿಗಳು ಏಪ್ರಿಲ್ ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ದರ ಇಳಿಕೆ ಮಾಡಿ ಗ್ರಾಹಕರ ಮೊಗದ ಮೇಲೆ ನಗುತರಿಸಿವೆ. ತೈಲ ಮಾರುಕಟ್ಟೆ ಕಂಪೆನಿಗಳು ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಡಿತವನ್ನು ಘೋಷಿಸಿದ್ದು, ಬೃಹತ್ ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ. ತಕ್ಷಣದಿಂದ ಜಾರಿಗೆ ಬರುವಂತೆ, ೧೯ ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ೪೧ ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ರಾಷ್ಟç ರಾಜಧಾನಿ ದೆಹಲಿಯಲ್ಲಿ, ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ ೧,೭೬೨ ರೂಪಾಯಿಗಳಷ್ಟಿದೆ. ಈ ಕಡಿತದ ಮೊದಲು, ದೆಹಲಿಯಲ್ಲಿ ೧೯ ಕೆ.ಜಿ. ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ ೧೮೦೩ ರೂ.ಗಳಷ್ಟಿತ್ತು.