ಸಿದ್ದಾಪುರ, ಮಾ. ೩೧: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ಪ್ರದೇಶದಲ್ಲಿ ಕಸವಿಲೇವಾರಿ ಮಾಡುವು ದನ್ನು ಖಂಡಿಸಿ ಜಿಲ್ಲಾ ಬಹುಜನ ಸಮಾಜ ಪಕ್ಷದ ವತಿಯಿಂದ ನಡೆದಿರುವ ಅಹೋರಾತ್ರಿ ಪ್ರತಿಭಟನೆ ಮುಂದುವರಿದಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೊಟ್ಟೆಪಾಳಿ ಭಾಗದಲ್ಲಿ ವಸತಿ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಮಾಡುತ್ತಿದ್ದು ಕೂಡಲೇ ಈ ಜಾಗವನ್ನು ಬದಲಾಯಿಸಬೇಕೆಂದು ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಹೋರಾತ್ರಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಪ್ರತಿಭಟನಾ ಕಾರರಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭ ಬಹುಜನ ಸಮಾಜವಾದಿ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.