ಸಿದ್ದಾಪುರ, ಏ. ೧: ಗುಹ್ಯ ಗ್ರಾಮದ ನದಿ ದಡದ ಬಳಿ ರೂ. ೨ ಕೋಟಿ ವೆಚ್ಚದ ತಡೆಗೋಡೆ ಕಾಮಗಾರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ವೀರಾಜಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ನಿಗಮದ ವತಿಯಿಂದ. ರೂ ಎಂಟು ಕೋಟಿಗೂ ಅಧಿಕ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಸಣ್ಣ ನೀರಾವರಿ ನಿಗಮದ ವತಿಯಿಂದ ಗುಹ್ಯ ಗ್ರಾಮದಲ್ಲಿ ಕಾವೇರಿ ನದಿ ತೀರದ ಬಳಿ ಭೂ ಕುಸಿತ ಆಗುವ ಜಾಗದಲ್ಲಿ ರೂ.೨ ಕೋಟಿ ವೆಚ್ಚದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡಲು ಚಾಲನೆ ನೀಡಲಾಗಿದ್ದು, ಕಾಮಗಾರಿಯು ಗುಣಮಟ್ಟದಲ್ಲಿ ಮಾಡುವಂತೆ ಸೂಚನೆ ನೀಡಿದರು. ಸರ್ಕಾರವು ಈಗಾಗಲೇ ವೀರಾಜಪೇಟೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಿದ್ದು, ಗ್ರಾಮೀಣ ಪ್ರದೇಶದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಅನುದಾನದಿಂದಲೂ ಕೂಡ ವೀರಾಜಪೇಟೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಹಾಗೂ ಪಂಚಾಯತ್ ರಾಜ್ ಅನುದಾನವೆಂದು ಕೂಡ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.
ಭೂಮಿ ಪೂಜೆಯ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ. ಅಭಿತ. ರೀನಾ ತುಳಸಿ. ಪೂರ್ಣಿಮಾ, ಹಸನ್ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಇನ್ನಿತರರು ಹಾಜರಿದ್ದರು.