ಪೊನ್ನಂಪೇಟೆ, ಏ. ೧: ಬಿಟ್ಟಂಗಾಲ ಸಮೀಪದ ವಿ.ಬಾಡಗ ಗ್ರಾಮದ ಕೊಕ್ಕದಲ್ಲಿ ನೂತನವಾಗಿ ಅಳವಡಿಸಲಾದ ವಿದ್ಯುತ್ ಪರಿವರ್ತಕ ಘಟಕವನ್ನು ಇತ್ತೀಚೆಗೆ ಲೋಕಾರ್ಪಣೆಗೊಳಿಸಲಾಯಿತು. ನೂತನ ಘಟಕವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು.

ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿ.ಬಾಡಗ ಭಾಗದ ಸುತ್ತಮುತ್ತಲಿನಲ್ಲಿ ಕಳೆದ ಹಲವು ವರ್ಷಗಳಿಂದ ಇರುವ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆಯನ್ನು ಪರಿಹರಿಸುವಂತೆ ಗ್ರಾಮಸ್ಥರು ಈ ಹಿಂದೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ವಿದ್ಯುತ್ ಪರಿವರ್ತಕವನ್ನು ಅಳವಡಿಸಲಾಗಿದ್ದು, ಗುಣಮಟ್ಟದ ವಿದ್ಯುತ್ ಪೂರೈಕೆಯಲ್ಲಿ ಇನ್ನು ಮುಂದೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಪೊನ್ನಣ್ಣ ಹೇಳಿದರು.

ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪಕ್ಷದ ಮುಖಂಡ ಮಳವಂಡ ಅರವಿಂದ್ ಕುಟ್ಟಪ್ಪ, ಗ್ರಾಮದ ಪ್ರಮುಖರಾದ ಕಂಜಿತAಡ ಗಿಣಿ ಮೊಣ್ಣಪ್ಪ, ಆಟ್ರಂಗಡ ಲೋಹಿತ್, ಕೊಂಗAಡ ಕಾಶಿ ಕಾರ್ಯಪ, ಕಂಜಿತAಡ ಪೂವಣ್ಣ, ಮಳವಂಡ ಮಣಿ ತಿಮ್ಮಯ್ಯ ಸೇರಿದಂತೆ ಸೆಸ್ಕ್ ಅಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.