ಮಡಿಕೇರಿ, ಮಾ. ೩೧: ಕರ್ನಾಟಕ ಸರ್ಕಾರ ರಾಜ್ಯದ ಒಟ್ಟು ೧೯೭ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕವನ್ನು ಘೋಷಿಸಿದ್ದು, ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ.ಎಸ್. ಸುಂದರ್ ರಾಜ್ ಅವರಿಗೂ ಮುಖ್ಯಮಂತ್ರಿ ಪದಕ ಲಭಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಸುಂದರ್ ರಾಜ್ ಅವರು ಮೈಸೂರು ನಗರ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.