ಮಡಿಕೇರಿ, ಏ. ೧: ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕ, ಸೆಲ್, ವಿಭಾಗಗಳು, ಜಿಲ್ಲಾ, ಬ್ಲಾಕ್‌ಗಳ ಬದಲಾವಣೆ ಸಂಬAಧ ಕೆಪಿಸಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ಗೆ ಲಖಿತವಾಗಿ ಆದೇಶ ನೀಡಿತ್ತು.

ಮಾರ್ಚ್ ೧೬ ರೊಳಗೆ ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕ, ಬ್ಲಾಕ್‌ಗಳ ಆಕಾಂಕ್ಷಿಗಳ ಪಟ್ಟಿಯನ್ನು ನೀಡುವಂತೆ ಕೆಪಿಸಿಸಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಆಕಾಂಕ್ಷಿಗಳಿAದ ಅರ್ಜಿ ಆಹ್ವಾನಿಸಲಾಗಿತ್ತು. ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಮಾರ್ಚ್ ೧೩ ಕೊನೆ ದಿನ ಎಂದು ಉಲ್ಲೇಖ ಮಾಡಲಾಗಿತ್ತು.

ಇದೀಗ ಕೊಡಗು ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆವರೆಗೆ ಮುಂದುರಿಸುವುದು ನಿಶ್ಚಿತವಾಗಿದೆ. ಜಿಲ್ಲಾ ಪಂಚಾಯಿತಿ ಚುನಾವಣೆಯ ಬಳಿಕ ಹೊಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡುವ ಸಾಧ್ಯತೆ ಇದೆ.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಕೊಟ್ಟಮುಡಿ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಹೊರತುಪಡಿಸಿ ಉಳಿದ ನಾಲ್ವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಅವಧಿ ಐದು ವರ್ಷ ಪೂರ್ಣಗೊಂಡಿದೆ.

ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ಆಯ್ಕೆ ಪ್ರಕ್ರಿಯೆ ಮೂಲಕವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ಮುಂದುರಿಸುವ ಸಾಧ್ಯತೆಗಳಿವೆ. ಉಳಿದ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡದ ಪದಾಧಿಕಾರಿಗಳ ಬದಲಾವಣೆ ನಿಶ್ಚಿತವಾಗಿದೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಕೊಡಗು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯತ್ತ ಮುಖಮಾಡಿದೆ. ಮಾರ್ಚ್ ೧೬ ರೊಳಗೆ ಎಲ್ಲಾ ಮುಂಚೂಣಿ ಘಟಕ ಹಾಗೂ ಬ್ಲಾಕ್ ಅಧ್ಯಕ್ಷರ ಆಕಾಂಕ್ಷಿಗಳ ಪಟ್ಟಿಯನ್ನು ಮೇಲ್ ಮಾಡುವಂತೆ ಕೆಪಿಸಿಸಿ ಮಾರ್ಚ್ ೬ ರಂದು ಪತ್ರ ಬರೆದು ಸೂಚನೆ ನೀಡಿತ್ತು.

ಇತ್ತ ಬ್ಲಾಕ್ ಅಧ್ಯಕ್ಷ ಸ್ಥಾನ! ಅತ್ತ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿ!

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮತ್ತು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಆದರೆ ಮೀಸಲಾತಿ ಪ್ರಕಟಗೊಳ್ಳದಿರುವುದರಿಂದ ಜಿಲ್ಲಾ ಪಂಚಾಯಿತಿ ಚುನಾವಣೆವರೆಗೆ ಈ ಮೂವರನ್ನು ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಏತನ್ಮಧ್ಯೆ ಕಾಂಗ್ರೆಸ್ ಪಕ್ಷ ಅಧಿಕಾರ ಮತ್ತು ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕದ್ವಯರೇ ಇರುವುದರಿಂದ ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಮನಸ್ಸಿಲ್ಲ.

ಅದಲ್ಲದೇ ಹಾಲಿ ಅಧ್ಯಕ್ಷರನ್ನೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಸಿದರೆ, ಹೊಸ ಮುಖಗಳಿಗೆ ಕೂಡ ಅವಕಾಶ ಇಲ್ಲದಂತಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ವಲಯದಲ್ಲಿ ಮಾತುಗಳಿವೆ.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಕೊಟ್ಟಮುಡಿ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ನಾಪೋಕ್ಲು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನಿAದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇಬ್ಬರು ಕೂಡ ಮೀಸಲಾತಿ ಪ್ರಕಟವಾಗುವ ಮುನ್ನವೇ ಚುನಾವಣಾ ಸಿದ್ಧತೆಯಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಹೆಚ್.ಎ. ಹಂಸ ಕೊಟ್ಟಮುಡಿ ಹಾಗೂ ಕೆ.ಎ. ಇಸ್ಮಾಯಿಲ್ ಅವರಿಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಾಧ್ಯತೆಗಳಿವೆ. ಆದರೆ ಯಾವ ಕ್ಷೇತ್ರ ಎಂಬ ಖಚಿತತೆ ಇಲ್ಲ.

ಮತ್ತೊಂದೆಡೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಕೂಡಿಗೆ ಅಥವಾ uಟಿಜeಜಿiಟಿeಜ ವಾಲ್ನೂರು-ತ್ಯಾಗತ್ತೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸುವುದು ಗ್ಯಾರಂಟಿ.

ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳಾಗಿರುವ ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಜಿಲ್ಲಾ ಪಂಚಾಯಿತಿ ಚುನಾವಣೆಯ ನಂತರ ಬಿಟ್ಟುಕೊಡಬೇಕಾದ ಅನಿವಾರ್ಯತೆ ಇದೆ. ಮತ್ತೊಂದೆಡೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಜಿಲ್ಲಾ ಪಂಚಾಯಿತಿ ಟಿಕೆಟ್ ಸಿಕ್ಕರೆ ಸ್ಪರ್ಧಿಸುವ ಇಂಗಿತ ಹೊಂದಿದ್ದಾರೆ.

ಟಿಕೆಟ್ ಕೊಟ್ಟರೆ ಸ್ಪರ್ಧಿಸೋಣ, ಇಲ್ಲದಿದ್ದರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲೇ ಮತ್ತೊಂದು ಅವಧಿಗೆ ಮುಂದುವರಿಯೋಣ ಎಂಬ ಚಿಂತನೆಯಲ್ಲಿದ್ದಾರೆ. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುವ ಅಭಿಲಾಷೆ ಹೊಂದಿದ್ದಾರೆ.

ಏತನ್ಮಧ್ಯೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನನಗೆ ಕೊಡಿ ಎಂದು ಮಾಯುಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ ಪ್ರಬಲವಾಗಿ ಕಾಂಗ್ರೆಸ್ ಮುಖಂಡರೊAದಿಗೆ ಹೇಳಿಕೊಂಡಿದ್ದಾರೆ. ಅದಲ್ಲದೇ ಈ ಬಾರಿ ನನಗೆ ಜಿಲ್ಲಾ ಪಂಚಾಯಿತಿ ಟಿಕೆಟ್ ಕೂಡ ನೀಡಬೇಕೆಂದು ಟಾಟು ಮೊಣ್ಣಪ್ಪ ಒತ್ತಾಯ ಮಾಡಿದ್ದಾರೆ.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ತಿತಿಮತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಲು ಟಾಟು ಮೊಣ್ಣಪ್ಪ ಆಕಾಂಕ್ಷಿಯಾಗಿದ್ದಾರೆ.

ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿ ಕಂಡುಬAದಿತ್ತು. ಕೊಡವ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳು ಪ್ರತ್ಯೇಕ ಸಭೆ ನಡೆಸಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿತ್ತು. ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಪಟ್ಟಡ ರಂಜಿ ಪೂಣಚ್ಚ ಅವರನ್ನೇ ಮತ್ತೊಂದು ಅವಧಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಸುವುದು ಗ್ಯಾರಂಟಿಯಾಗಿದೆ.

ಸೋಷಿಯಲ್ ಜಸ್ಟೀಸ್ ಪಾಲಿಸುವ ಸಾಧ್ಯತೆ!

ಒಂದು ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಈ ಬಾರಿ ಸಾಮಾಜಿಕ ನ್ಯಾಯ (ಸೋಷಿಯಲ್ ಜಸ್ಟೀಸ್) ಪಾಲಿಸುವ ಸಾಧ್ಯತೆ ಇದೆ.

ಪ್ರಸ್ತುತ ಇಬ್ಬರು ಕೊಡವ, ಇಬ್ಬರು ಒಕ್ಕಲಿಗರು ಹಾಗೂ ಇಬ್ಬರು ಅಲ್ಪಸಂಖ್ಯಾತ ಮುಸ್ಲಿಮ್ ಮುಖಂಡರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಮುಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಒಬ್ಬ ಅರೆಭಾಷೆ ಗೌಡ, ಹಿಂದುಳಿದ ವರ್ಗ ಅಥವಾ ದಲಿತ, ಅಲ್ಪಸಂಖ್ಯಾತ, ಕೊಡವ ಹಾಗೂ ಒಕ್ಕಲಿಗ ಗೌಡ ಮುಖಂಡರಿಗೆ ಬ್ಲಾಕ್ ಅಧ್ಯಕ್ಷ ಸ್ಥಾನವನ್ನು ನೀಡುವ ಚಿಂತನೆಯಲ್ಲಿ ಕಾಂಗ್ರೆಸ್ ಇದೆ. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗಕ್ಕೆ ನೀಡಬೇಕೆಂಬ ಒತ್ತಾಯ ಇದೆ. ಮಂತರ್ ಗೌಡ ಅಭಿಮಾನಿ ಬಳಗದ ಅಧ್ಯಕ್ಷ ಸುಜಿತ್ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಮತ್ತೊAದೆಡೆ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅರೆಭಾಷೆ ಗೌಡ ಹಾಗೂ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡಬೇಕೆಂಬ ಕೂಗು ಕಾಂಗ್ರೆಸ್‌ನಲ್ಲಿ ಪ್ರಬಲವಾಗಿ ಕೇಳಿಬರುತ್ತಿದೆ.

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ!

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಪಿ.ಎ., ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅದರೊಂದಿಗೆ ಬಿಟ್ಟಂಗಾಲ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ.

ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನ ಪಕ್ಷದ ಕಾರ್ಯಕ್ರಮಗಳ ವೇದಿಕೆಯಲ್ಲಿ ಕೂರಲು ಮಾತ್ರ ಲಾಯಕ್ ಎಂಬ ಮಾತುಗಳಿವೆ. ಅದಲ್ಲದೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಪಕ್ಷದ ಸೂಚನೆಯಿಲ್ಲದೆ ಯಾವುದೇ ಹೇಳಿಕೆ ಕೂಡ ನೀಡಲು ಸ್ವಾತಂತ್ರ‍್ಯವಿಲ್ಲದ ಪರಿಸ್ಥಿತಿ ಇದೆ.

ಮತ್ತೊಂದೆಡೆ ಯಾರಿಗೂ ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಲು ಆಸಕ್ತಿ ಇಲ್ಲ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಅವರ ಅವಧಿ ಪೂರ್ಣಗೊಂಡಿಲ್ಲ.

ಮತ್ತೊAದೆಡೆ ಜಿಲ್ಲಾ ಮಹಿಳಾ ಕಾಂಗ್ರೆಸ್, ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನಕ್ಕೆ ಹೊಸ ಅಧ್ಯಕ್ಷರ ನೇಮಕವೂ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ.

ಕೊಡಗು ಜಿಲ್ಲೆಯಲ್ಲಿ ಬ್ಲಾಕ್ ಅಧ್ಯಕ್ಷರನ್ನು ಹೊರತುಪಡಿಸಿ, ಉಳಿದ ಮುಂಚೂಣಿ ಘಟಕಗಳಿಗೆ ಹೊಸಬರಿಗೆ ಅವಕಾಶ ನೀಡಿದ ನಂತರ ವಲಯ ಮತ್ತು ಬೂತ್ ಅಧ್ಯಕ್ಷರನ್ನು ನೇಮಕ ಮಾಡಿ, ಪಕ್ಷ ಸಂಘಟನೆಯತ್ತ ಕಾಂಗ್ರೆಸ್ ಮುಖ ಮಾಡಲು ನಿರ್ಧರಿಸಿದೆ. - ಕೆ.ಎಂ. ಇಸ್ಮಾಯಿಲ್ ಕಂಡಕರೆ