ಮಡಿಕೇರಿ, ಏ. ೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ತಾ. ೨ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಟಿ.ಕೆ. ಪಾಂಡುರAಗ, ರಾಜ್ಯ ನೇಕಾರರ ಒಕ್ಕೂಟದ ನಿರ್ದೇಶಕ ಡಿ.ಕೆ. ತಿಮ್ಮಪ್ಪ, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಡಿ.ವಿ. ಜಗದೀಶ, ಶ್ರೀ ರಾಮಲಿಂಗೇಶ್ವರ ಚೌಡೇಶ್ವರಿ ದೇವಾಲಯ ಸಮಿತಿಯ ಅಧ್ಯಕ್ಷ ಗಜೇಂದ್ರ, ಕಣಿವೆಯ ಸಾಹಿತಿ ಭಾರಧ್ವಾಜ್ ಆನಂದ ತೀರ್ಥ, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.