ಸೋಮವಾರಪೇಟೆ,ಏ.೧: ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿ ಸ್ವಾತಂತ್ರö್ಯಪೂರ್ವ ಸ್ಥಾಪನೆಗೊಂಡು ಶತಮಾನೋತ್ಸವದ ಸಂಭ್ರಮದಲ್ಲಿರುವ ಸರ್ಕಾರಿ ಮಾದರಿ ಪಾಥಮಿಕ ಶಾಲೆಯಲ್ಲಿ ಅವಿಸ್ಮರಣೀಯ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಎಸ್.ಜಿ. ಮೇದಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನೋತ್ಸವ ಅಂಗವಾಗಿ ತಾ. ೪ ರಿಂದ ೬ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಾ. ೪ರಂದು ಬೆಳಿಗ್ಗೆ ೯.೩೦ರಿಂದ ಶಾಂತಳ್ಳಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಇದೇ ಪ್ರಥಮ ಬಾರಿಗೆ ದೊಡ್ಡ ಮಟ್ಟದಲ್ಲಿ ಶಿಬಿರ ಆಯೋಜನೆಗೊಂಡಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಶ್ರಯದಲ್ಲಿ ಶಿಬಿರ ನಡೆಯಲಿದ್ದು, ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರು ಶಿಬಿರ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

(ಮೊದಲ ಪುಟದಿಂದ) ಶಿಬಿರದಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಪ್ರಸೂತಿ ಹಾಗೂ ಸ್ತಿçà ರೋಗ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಕಣ್ಣಿನ ವಿಭಾಗ, ಮಾನಸಿಕ ಆರೋಗ್ಯ ವಿಭಾಗ, ಶ್ವಾಸಕೋಶ ರೋಗಗಳ ವಿಭಾಗ, ಕಿವಿ ಮೂಗು ಗಂಟಲು ವಿಭಾಗ, ಚರ್ಮರೋಗಗಳ ವಿಭಾಗ, ದಂತ ಚಿಕಿತ್ಸಾ ವಿಭಾಗ, ಮಕ್ಕಳ ವಿಭಾಗಕ್ಕೆ ಸಂಬAಧಿಸಿದ ತಜ್ಞ ವೈದ್ಯರುಗಳು ಭಾಗಿಯಾಗಲಿದ್ದು, ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದರು.

ಇದರೊAದಿಗೆ ಆನ್‌ಲೈನ್ ಹೊರರೋಗಿಗಳ ನೋಂದಣಿ, ಆಯುಷ್ಮಾನ್ ಭಾರತ್ ನೋಂದಣಿ, ಯುಡಿಐಡಿ ವಿಕಲಚೇತನರ ಕಾರ್ಡ್ ನೋಂದಣಿ, ಅಂಗಾAಗ ದಾನ ನೋಂದಣಿ, ಉಚಿತ ಡಯಾಬಿಟಿಕ್ ಹಾಗೂ ಬಿಪಿ ತಪಾಸಣೆ, ರಕ್ತದಾನ ಶಿಬಿರ, ಇಸಿಜಿ ತಪಾಸಣೆ, ಎಕ್ಸರೇ, ಉಚಿತ ಔಷಧಿ ವಿತರಣೆಯೂ ನಡೆಯಲಿದೆ ಎಂದು ಮಾಹಿತಿಯಿತ್ತರು.

ಸಾರ್ವಜನಿಕರು ಆರೋಗ್ಯ ತಪಾಸಣೆಗೆ ಬರುವಾಗ ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಹಾಗೆಯೇ ಸರಕಾರದ ಆರೋಗ್ಯ ಯೋಜನೆಗಳ ಫಲಾನುಭವಿಗಳಾಗಲು ಯಶಸ್ವಿನಿ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು ಆರ್.ಡಿ. ಸಂಖ್ಯೆಯುಳ್ಳ ಜಾತಿ ದೃಢೀಕರಣ ಪತ್ರ ತರಬೇಕಿದೆ. ಹೆಚ್ಚಿನ ಮಾಹಿತಿಗೆ ಡಾ. ಧಜಂಜಯ್, ಮೊ:೯೯೪೫೬೦೭೧೬೬ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್, ಮೆಡಿಕಲ್ ಕಾಲೇಜಿನ ಡೀನ್ ಡಾ. ಎ.ಜೆ. ಲೋಕೇಶ್, ಅಧೀಕ್ಷಕ ಡಾ. ಸೋಮಶೇಖರ್, ಡಾ. ಧನಂಜಯ್ ಮೇದಪ್ಪ, ಸಮಿತಿ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಗ್ರಾ.ಪಂ. ಅಧ್ಯಕ್ಷೆ ಸವಿತ ವಿಜಯ್, ಮಾಜೀ ಅಧ್ಯಕ್ಷ ಕೆ.ಟಿ. ರಾಜಶೇಖರ್, ಗ್ರಾಮಾಧ್ಯಕ್ಷ ಜಿ.ಡಿ. ಬಸವರಾಜು,ಯುವಕ ಸಂಘದ ಅಧ್ಯಕ್ಷ ಸಜನ್ ಮಂದಣ್ಣ, ಪಿಡಿಓ ವೇಣುಗೋಪಾಲ್ ಸೇರಿದಂತೆ ಇತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತಾ. ೫ ರಂದು ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಲಿದೆ. ಬೆಳಿಗ್ಗೆ ೧೦ ಗಂಟೆಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್ ಉದ್ಘಾಟಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಸಿ. ಗುರುಪ್ರಸಾದ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಗೋಷ್ಠಿಯಲ್ಲಿ ಸಮಿತಿಯ ಖಜಾಂಚಿ ಕೆ.ಟಿ. ರಾಜಶೇಖರ್, ಆಹಾರ ಸಮಿತಿ ಅಧ್ಯಕ್ಷ ಕೆ.ಎಸ್. ಮನೋಹರ್, ಎಸ್‌ಡಿಎಂಸಿ ಅಧ್ಯಕ್ಷ ಕೆ.ಸಿ. ಗುರುಪ್ರಸಾದ್, ಮಾಜೀ ಅಧ್ಯಕ್ಷ ಕೆ.ಕೆ. ವಿಜಯ ಅವರುಗಳು ಉಪಸ್ಥಿತರಿದ್ದರು.