ವೀರಾಜಪೇಟೆ, ಏ. ೧: ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಅವರು ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕೊಡಗು ಜಿಲ್ಲೆಯ ಗ್ರಾಮಗಳ ಸಮಗ್ರ ಅಭಿವೃದ್ದಿಗೆ ಕೈಗೊಂಡಿರುವ ಕ್ರಮಗಳು ಹಾಗೂ ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವೀರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ ಸೇರಿದಂತೆ ಶಕ್ತಿ ಕೇಂದ್ರದ ಪ್ರಮುಖರು, ಸಾರ್ವಜನಿಕರು ಹಾಜರಿದ್ದರು.