ಮಡಿಕೇರಿ, ಏ. ೨: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕೋರಮಂಗಲದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಮೂವರು ಮುಖ್ಯಮಂತ್ರಿ ಪದಕ ಸ್ವೀಕರಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ಮೈಸೂರಿಗೆ ವರ್ಗಾವಣೆಗೊಂಡ ಕೆ.ಎಸ್. ಸುಂದರ್‌ರಾಜ್ ಸೇರಿದಂತೆ ಮೂಲತಃ ಮಾಯಮುಡಿ ನಿವಾಸಿ, ಪ್ರಸ್ತುತ ಭಯೋತ್ಪಾದಕ ನಿಗ್ರಹ ದಳ ಬೆಂಗಳೂರು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಎಸ್. ರಾಚಪ್ಪ ಹಾಗೂ ವೀರಾಜಪೇಟೆ ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿ ಡಿ. ರಾಜಾ ದೊರೈ ಪಾಂಡಿಯನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪದಕ ಪ್ರದಾನ ಮಾಡಿದರು.