ಮಡಿಕೇರಿ, ಏ. ೨: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ ೨೦ನೇ ಘಟಿಕೋ ತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ ಎಂ.ಎ. ಕನ್ನಡ ವಿಭಾಗದಲ್ಲಿ ವಿಶ್ವವಿದ್ಯಾನಿಲಯಕ್ಕೆ ೭ನೇ ರ್ಯಾಂಕ್ ಪಡೆದಿದ್ದಾರೆ. ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿAದ ಕನ್ನಡ ವಿಷಯದಲ್ಲಿ ಇವರು ಪ್ರಥಮ ಸ್ಥಾನ ಗಳಿಸಿದ್ದಾರೆ. ಸುಮನ್ ೨೦೧೪ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು.