ಪೊನ್ನಂಪೇಟೆ, ಏ. ೭: ಗೋಣಿಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಸಾಹಿತಿ ಹಾಗೂ ಮಡಿಕೇರಿ ಆಕಾಶವಾಣಿ ಕಲಾವಿದ ನಾಗೇಶ್ ಕಾಲೂರು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಂಡು ಸಾಧನೆಗೆ ಮುಂದಾಗಬೇಕು. ಸಾಧನೆಯ ಹಾದಿಯಲ್ಲಿ ಸೋಲುಗಳು ಇರುತ್ತವೆ. ಸೋತಾಗ ಕುಗ್ಗದೆ ಮರಳಿ ಪ್ರಯತ್ನವನ್ನು ಮಾಡುವ ಮೂಲಕ ಅಂದುಕೊAಡಿ ದ್ದನ್ನು ಸಾಧಿಸಬೇಕು ಎಂದರು. ನಾವು ಆಡುವ ಮಾತು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ ಮತ್ತು ನಮಗೆ ಗೌರವವನ್ನು ತಂದುಕೊಡುತ್ತದೆ. ಒಬ್ಬ ವ್ಯಕ್ತಿಯ ಮಾತು ಆತನ ಸಂಸ್ಕಾರವನ್ನು ತಿಳಿಸುತ್ತದೆ. ಆದ್ದರಿಂದ ಆಡುವ ಮಾತಿನ ಮೇಲೆ ನಿಗಾ ಇರಬೇಕು ಎಂದರು.
ಮತ್ತೊಬ್ಬರು ಅಥಿತಿ ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿ ಚಿಕ್ಕಮಗಳೂರಿನಲ್ಲಿ ಅರ್‌ಟಿಓ ಅಧಿಕಾರಿಯಾಗಿರುವ ಚಂದ್ರಕಲಾ. ಎನ್. ಎಸ್. ಮಾತನಾಡಿ, ಸಾಮಾಜಿಕ ಜಾಲತಾಣಗಳು ಅಸ್ತçದ ಹಾಗೆ ಕೆಲಸ ನಿರ್ವಹಿಸುತ್ತಿದ್ದು, ಇದರಿಂದ ಒಳಿತುಗಳಿಗಿಂತ ಕೆಡುಕುಗಳು ಹೆಚ್ಚಾಗಿವೆ. ಈ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.
ವಾಹನ ಚಲಾಯಿಸುವಾಗ ಯುವ ಜನತೆಯ ನಿರ್ಲಕ್ಷö್ಯದಿಂದಾಗಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಿದ್ದು, ಹಲವಾರು ಪೋಷಕರು ತಮ್ಮ ಮಕ್ಕಳನ್ನು ಕಳೆದುಕೊಳ್ಳುತ್ತಿದ್ದಾರೆ. ವಾಹನ ಚಲಾಯಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಜೊತೆಗೆ ದ್ವಿ ಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಮಾದಕವಸ್ತು ಗಳಿಂದ ದೂರವಿದ್ದು ಬದುಕು ಕಟ್ಟಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕೆ. ಶ್ರೀನಿವಾಸ್ ಅವರು ಕಾಲೇಜು ವಾರ್ಷಿಕ ವರದಿ ವಾಚಿಸಿದರು. ಶೈಕ್ಷಣಿಕ, ಕ್ರೀಡೆ ಹಾಗೂ ಇನ್ನಿತರ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಮೂಡಿಬಂದ ವಿವಿಧ ಸಂಸ್ಕೃತಿಯ ಕಾರ್ಯಕ್ರಮಗಳು ನೆರೆದಿದ್ದವರನ್ನು ರಂಜಿಸಿತು.
ವೇದಿಕೆಯಲ್ಲಿ ಕ್ರೀಡಾ ಸಮಿತಿ ಸಂಚಾಲಕ ಸುನಿಲ್ ಕುಮಾರ್, ಸಾಂಸ್ಕೃತಿಕ ಸಂಚಾಲಕ ರಾಜೇಶ್ ಎನ್ ಇದ್ದರು. ಕಾರ್ಯಕ್ರಮದಲ್ಲಿ ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕರುಗಳು, ಕಾವೇರಿ ಕಾಲೇಜು ಪ್ರಾಂಶುಪಾಲರುಗಳು, ಕಾವೇರಿ ಪಾಲಿ ಟೆಕ್ನಿಕ್ ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.