ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ

ಐಗೂರು, ಏ. ೭: ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಯಡವಾರೆ ಸ.ಹಿ.ಪ್ರಾಥಮಿಕ ಶಾಲೆಯ ೪೦ ವಿದ್ಯಾರ್ಥಿಗಳಿಗೆ ನೀಡಿದ ಸ್ವೆಟರ್‌ಗಳನ್ನು ವಿತರಿಸಲಾಯಿತು. ಐಗೂರು ಗ್ರಾಮ ಪಂಚಾಯಿತಿ ಸದಸ್ಯ ಬಾರನ ಪ್ರಮೋದ್ ಲಿಂಗೇರಿ ರಾಜೇಶ್, ಪೂರ್ಣಿಮಾ, ಮುಖ್ಯ ಶಿಕ್ಷಕ ವೈ.ಸಿ. ಕುಮಾರ್, ಶಿಕ್ಷಕ ಕೆಂಪೇಗೌಡ, ಶಿಕ್ಷಕಿ ಜೋಸ್ಮಿನ್ ಮತ್ತು ಅಡುಗೆ ಸಿಬ್ಬಂದಿ ಹಾಜರಿದ್ದರು.

ಭಾಷಣ ಕಲೆ ತರಬೇತಿ ಕಾರ್ಯಾಗಾರ

ಸೋಮವಾರಪೇಟೆ, ಏ. ೭: ಜೆಸಿಐ ಪುಷ್ಪಗಿರಿ ಸೋಮವಾರಪೇಟೆ ವತಿಯಿಂದ ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ಕಾಲೇಜಿನ ಸಭಾಂಗಣ ದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಸಂತ ಜೋಸೆಫರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಅವಿನಾಶ್ ಉದ್ಘಾಟಿಸಿದರು. ನಂತರ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಎಲ್ಲರೂ ವೇದಿP ೆಯಲ್ಲಿ ಮಾತನಾಡುವ ಕಲೆಯನ್ನು ಕರಗತ ಮಾಡಿಕೊಂಡಲ್ಲಿ, ಮುಂದೆ ಸಾರ್ವಜನಿಕ ವೇದಿಕೆಯಲ್ಲಿ ಸುಲಭವಾಗಿ ಮಾತನಾಡ ಬಹುದು. ತಮಗೆ ಸಿಕ್ಕ ವೇದಿಕೆಯನ್ನು ಬಳಸಿ ಕೊಳ್ಳುವ ಮೂಲಕ ಸುಲಭವಾಗಿ ಮಾತನಾಡುವ ಕಲೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳ ಬೇಕೆಂದರು.

ತರಬೇತಿಯನ್ನು ಜೇಸೀ ವಲಯ ಮಟ್ಟದ ತರಬೇತುದಾರ ಪ್ರಶಾಂತ್ ನೀಡಿದರು. ಮಾತನಾಡುವಾಗ ತಪ್ಪುಗಳಾಗುತ್ತವೆ ಎಂಬ ಭಯದಿಂದ ವಿದ್ಯಾರ್ಥಿಗಳು ಮಾತನಾಡಲು ಮುಂದೆ ಬರುವುದಿಲ್ಲ. ಮೊದಲು ನಾವು ಭಯ ವನ್ನು ಬಿಟ್ಟು ಮಾತನಾಡಲು ಮುಂದೆ ಬರಬೇಕು. ತಪ್ಪುಗಳಾಗುವುದು ಸಹಜ, ಎಲ್ಲರೂ ಧೈರ್ಯದಿಂದ ವೇದಿಕೆಯಲ್ಲಿ ಮಾತನಾಡಲು ಮುಂದಾಗಬೇಕು.

ಮಾತನಾಡುವುದು ಒಂದು ಕಲೆಯಾಗಿದ್ದು, ನಿರಂತರ ಮಾತನಾಡುವುದ ರಿಂದ ನಮ್ಮ ಭಾಷಣ ಕಲೆಯನ್ನು ಉನ್ನತೀಕರಿಸಬಹುದು ಎಂದರು. ಕಾರ್ಯಾಗಾರದ ಅಧ್ಯಕ್ಷತೆ ಯನ್ನು ಜೇಸಿಐ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್ ವಹಿಸಿದರು. ಮುಖ್ಯ ಅತಿಥಿ ಗಳಾಗಿ ಕಾಲೇಜಿನ ಪ್ರಾಂಶುಪಾಲ ಹರೀಶ್, ಜೇಸಿಐ ಕಾರ್ಯದರ್ಶಿ ವಿನುತಾ ಸುದೀಪ್, ಜ್ಯೋತಿ ರಾಜೇಶ್, ಮಾಯಾ ಗಿರೀಶ್ ಮತ್ತು ನೆಲ್ಸನ್ ಇದ್ದರು.

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಮುಳ್ಳೂರು, ಏ. ೭: ಪ್ರಾಥಮಿಕ ಶಾಲೆಯ ಕೊನೆಯ ಹಂತ, ಏಳನೇ ತರಗತಿಯು ವಿದ್ಯಾರ್ಥಿ ಜೀವನದಲ್ಲಿ ಮೊದಲ ಮೆಟ್ಟಿಲಾಗುತ್ತದೆ ಎಂದು ದುಂಡಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಹೆಚ್.ಆರ್. ಮಲ್ಲೇಶ್ ಅಭಿಪ್ರಾಯಪಟ್ಟರು. ಅವರು ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಬೆಂಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಏಳನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಡಿ.ಎಲ್. ಮೂರ್ತಿ, ಮಾನವೀಯತೆ, ಸಂಸ್ಕಾರಗಳAತಹ ಮೌಲ್ಯಗಳನ್ನು ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಕಲಿಯುತ್ತಾರೆ. ವಿಶೇಷವಾಗಿ ಸರಕಾರಿ ಶಾಲೆಯ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳು ಗುರುಭಕ್ತಿಯನ್ನು ಕಲಿಯುತ್ತಾರೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲಾ ಹಂತದ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಗುರುಭಕ್ತಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.

ಸಹ ಶಿಕ್ಷಕಿ ಬಿ.ಕೆ. ಕುಸುಮಾ, ಅತಿಥಿ ಶಿಕ್ಷಕಿ ಹೆಚ್.ಆರ್. ರಶ್ಮಿತ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸೋಮವಾರಪೇಟೆ, ಏ. ೭: ಸಮೀಪದ ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ೭ನೇ ತರಗತಿ ವ್ಯಾಸಂಗ ಪೂರೈಸಿದ ವಿದ್ಯಾರ್ಥಿಗಳಿಗೆ ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದಿಂದ ಬೀಳ್ಕೊಡಲಾಯಿತು. ಶಾಲೆಯ ಪ್ರಗತಿಗೆ ಸಹಕಾರ ನೀಡುತ್ತಿರುವ ದಾನಿಗಳಾದ ಅರೆಯೂರಿನ ಕೆ.ಎನ್. ಪಾಪಯ್ಯ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿಲೀಪ್, ಉಪಾಧ್ಯಕ್ಷೆ ದೇಚಮ್ಮ, ನವೀನ್‌ಕುಮಾರ್, ಶಂಷುದ್ದೀನ್, ರಮೇಶ್, ಚೇತನ್, ಮುಖ್ಯ ಶಿಕ್ಷಕಿ ಎಸ್ತೆಲಾ ಡಿಸಿಲ್ವಾ, ಶಿಕ್ಷಕರಾದ ರಮೇಶ್, ಶಶಿಕಲಾ, ಗಣೇಶ್, ಹೇಮಲತಾ, ಪೋಷಕರು ಉಪಸ್ಥಿತರಿದ್ದರು.

ವಿ.ವಿ. ಉಳಿಸುವಂತೆ ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ

ಮಡಿಕೇರಿ, ಏ.೭: ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾಗಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಬೇಕು ಮತ್ತು ಇದರ ಪ್ರಗತಿಗೆ ಅಗತ್ಯವಿರುವ ಅನುಕೂಲವನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಉನ್ನತ ಶಿಕ್ಷಣ ಸಚಿವ ಸುಧಾಕರ ಅವರಿಗೆ ಮನವಿ ಸಲ್ಲಿಸಿದೆ. ಈ ಕುರಿತು ಮಾಹಿತಿ ನೀಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು, ಕೊಡಗು ವಿಶ್ವ ವಿದ್ಯಾನಿಲಯವನ್ನು ಉಳಿಸಿಕೊಳ್ಳುವುದ ರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುವುದಲ್ಲದೆ ಜಿಲ್ಲೆಯ ಆರ್ಥಿಕ ಪ್ರಗತಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಕೊಡಗು ಜಿಲ್ಲೆಯಲ್ಲೇ ವಿಶ್ವವಿದ್ಯಾನಿಲಯ ಸ್ಥಾಪನೆ ಯಾಗಿರುವುದರಿಂದ ಸಾವಿರಾರು ಬಡ ವಿದ್ಯಾರ್ಥಿಗಳು ಇದರ ಲಾಭ ಪಡೆಯುತ್ತಿದ್ದರು. ಸಂಶೋಧನೆಗೆ ಅವಕಾಶವಿದೆ, ಉದ್ಯೋಗ ಸೃಷ್ಟಿಯಾಗಿದೆ, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಇದು ಪೂರಕವಾಗಿದೆ. ಆದ್ದರಿಂದ ಕೊಡಗು ವಿ.ವಿ.ಯನ್ನು ಕೊಡಗು ಜಿಲ್ಲೆಯಲ್ಲೇ ಉಳಿಸಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದರು.