ಕುಶಾಲನಗರ, ಏ. ೭: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಸೇತುವೆ ಕೆಳಭಾಗದ ನದಿಯಲ್ಲಿ ಅಪರಿಚಿತ ಗಂಡಸಿನ ಮೃತ ದೇಹ ಪತ್ತೆಯಾಗಿದೆ.
ಬೆಳಿಗ್ಗೆ ೯ ಗಂಟೆಗೆ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೇಹ ಕಂಡು ಬಂದ ಬಗ್ಗೆ ಕುಶಾಲನಗರ ಪಟ್ಟಣ ಪೊಲೀಸರಿಗೆ ಮಾಹಿತಿ ದೊರೆತು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಅಂದಾಜು ೪೦ ರಿಂದ ೪೫ ವರ್ಷ ವಯೋಮಾನದ ಪುರುಷನ ಶವ ಇದಾಗಿದ್ದು ವಿವರ ಪತ್ತೆಯಾಗಿಲ್ಲ.
ಸ್ಥಳಕ್ಕೆ ಕುಶಾಲನಗರ ಟೌನ್ ಇನ್ಸ್ಪೆಕ್ಟರ್ ಪ್ರಕಾಶ್, ಸಂಚಾರಿ ಠಾಣೆ ಸಬ್ ಇನ್ಸ್ಪೆಕ್ಟರ್ ಗಣೇಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ನದಿಯಿಂದ ಮೃತ ದೇಹವನ್ನು ಹೊರತೆಗೆಯಲು ಕ್ರಮ ಕೈಗೊಂಡರು.
ದೇಹ ಬಹುತೇಕ ಕೊಳೆತಿದ್ದು, ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಯಿತು.