ಕಣಿವೆ, ಏ. ೭: ವಿದ್ಯಾರ್ಥಿಗಳು ಶಿಸ್ತು ಸಂಯಮ ಮೈಗೂಡಿಸಿ ಕೊಳ್ಳಲು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮ ವೇದಿಕೆ ಎಂದು ಕುಶಾಲನಗರ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ಹೇಳಿದರು.

ಮುಳ್ಳುಸೋಗೆಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಶಾಲಾ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಮವಸ್ತç ಧಾರಿಗಳಿಗೆ ಸಮಾಜದಲ್ಲಿ ಯಾವಾಗಲೂ ವಿಶೇಷ ಗೌರವ ವಿರುತ್ತದೆ.

ಹಾಗಾಗಿ ಶಾಲಾ ಮಕ್ಕಳು ಶಾಲಾ ಕಲಿಕೆಯ ಅವಧಿಯಲ್ಲಿ ಜೀವನದ ಮೌಲ್ಯಗಳನ್ನು ಅರಿತು ಅದರಂತೆ ನಡೆಯಬೇಕು. ಸಮಾಜದಲ್ಲಿ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಲು ಗಂಗಾಧರಪ್ಪ ಕರೆಕೊಟ್ಟರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಮಾತನಾಡಿ, ಸಮಾಜದಲ್ಲಿ ಯುವಜನರ ಆಸಕ್ತಿಯನ್ನು ಆಧರಿಸಿದ ಪ್ರಗತಿಪರ ಚಟುವಟಿಕೆಗಳು, ಸರಳತೆ, ಸೃಜನಶೀಲತೆ, ಪರಿಶೋಧಕತೆ, ಸಚ್ಚಾರಿತ್ರö್ಯ ನಿರ್ಮಾಣ ಮಾಡುವಲ್ಲಿ ಹಾಗೂ ಸಮಾಜೋಪಯೋಗಿ ವ್ಯಕ್ತಿಗಳಾಗಿ ರೂಪಿಸುವಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ. ಪರಸ್ಪರ ಸೌಹಾರ್ದತೆ ಹಾಗೂ ಭ್ರಾತೃತ್ವವನ್ನು ಬೆಳೆಸುವ ಸಂಸ್ಥೆಯಾಗಿದೆ. ಆದ್ದರಿಂದ ಸಾರ್ವಜನಿಕರು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಬೇಬಿ ಮ್ಯಾಥ್ಯು ಕೋರಿದರು. ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಮೂಡಿಸಲು ಇಂತಹ ವೇದಿಕೆಗಳು ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಬೇಸಗೆ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಶಿಕ್ಷಕ ರಂಜಿತ್ ಹಾಗೂ ಸುಲೋಚನಾ ಕಾರ್ಯ ನಿರ್ವಹಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಹೆಚ್.ಕೆ. ವಿಜಯ, ಲಯನ್ಸ್ ಕಾರ್ಯದರ್ಶಿ ನಿತಿನ್ ಗುಪ್ತಾ, ದಯಾನಂದ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಯೋಜಕಿ ದಮಯಂತಿ, ಕುಶಾಲನಗರ ಸ್ಥಳೀಯ ಸಂಸ್ಥೆ ಕಾರ್ಯಾಧ್ಯಕ್ಷ ತಮ್ಮಯ್ಯ, ಖಜಾಂಚಿ ನಡುವಟ್ಟಿರ ನರೇಶ್ ಕುಮಾರ್, ಉಪಾಧ್ಯಕ್ಷ ಅರುಣ್, ಜಯಲಕ್ಷಿö್ಮ, ಕೆ.ಬಿ. ಗಣೇಶ್, ಸುಲೋಚನಾ, ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್. ಗಣೇಶ್ ಸ್ವಾಗತಿಸಿದರು, ಅರುಣ್ ವಂದಿಸಿದರು.