ವೀರಾಜಪೇಟೆ, ಏ. ೭: ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗ ವತಿಯಿಂದ ೨೦೨೪-೨೫ನೇ ಸಾಲಿಗೆ ಮಂಜೂರಾದ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ವಿದ್ಯುತ್ ಚಾಲಿತ ಉಪಕರಣಗಳನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿತರಿಸಿದರು.

ವೀರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸಲಕರಣೆ ವಿತರಿಸಿದ ಬಳಿಕ ಮಾತನಾಡಿದ ಶಾಸಕರು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಜನತೆ ಇದರ ಸದುಪಯೋಗಪಡಿಸಿಕೊಳ್ಳುವುದರೊಂದಿಗೆ ತಮ್ಮ ಜೀವನಮಟ್ಟ ಏರಿಸಿಕೊಳ್ಳುವುದು ಹಾಗೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಮುಂದೆ ಬರಬೇಕೆಂದು ಇದೇ ಸಂದರ್ಭ ಕರೆ ನೀಡಿದರು.

ಕಾಂಗ್ರೆಸ್ ಸರಕಾರದ ಇಂತಹ ಕಾರ್ಯಕ್ರಮಗಳು ಪ್ರಾಚೀನ ಕಾಲದ ಕಲೆಯನ್ನು ಪೋಷಿಸುವುದರೊಂದಿಗೆ ಗ್ರಾಮೀಣ ಭಾಗದ ಜನತೆಗೆ ಮುನ್ನಡೆಗೆ ಬರಲು ತುಂಬಾ ಸಹಕಾರಿಯಾಗಲಿದೆ. ಗ್ರಾಮೀಣ ಕುಶಲಕರ್ಮಿಗಳು ತಮ್ಮ ತಲಾತಲಾಂತರದಿAದ ಬಂದAತಹ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತಾ ಗ್ರಾಮೀಣ ಭಾರತದ ಏಳಿಗೆಗೆ ಶ್ರಮಿಸಬೇಕಾಗಿ ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಲು ತಾವು ಸರ್ಕಾರದೊಂದಿಗೆ ಮಾತನಾಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.