ಐಗೂರು, ಏ. ೧೩: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡವಾರೆಯ ಶ್ರೀ ಚೆನ್ನಿಗರಾಯ ದೇವಾಲಯದ ಮೂರನೇ ವರ್ಷದ ವಾರ್ಷಿಕ ಮಹೋತ್ಸವ ತಾ. ೨೪ ರಂದು ಬೆಳಿಗ್ಗೆ ೭ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ನಡೆಯಲಿದೆ.

ಶ್ರೀ ಕ್ಷೇತ್ರದ ತಂತ್ರಿಗಳಾದ ಚಾಲಕುನ್ನತ್ತಿಲಂ ಗೋಪಾಲಕೃಷ್ಣ ನಂಬೂದರಿ ಅವರ ನೇತೃತ್ವದಲ್ಲಿ ಗೋಪೂಜೆ, ಪುಣ್ಯಾಹ ಶುದ್ಧಿ, ಸಾಮೂಹಿಕ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಾಭಿವೃದ್ಧಿ ಕಲಶ ಅಭಿಷೇಕ, ಅಲಂಕಾರ ಸಹಿತ ಮಹಾಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ. ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.