ಮಡಿಕೇರಿ, ಏ.೧೩ : ಕೊಡವ ಜನಾಂಗದ ಎಡ್ಮಾö್ಯರ್ ೧ ಹೊಸ ವರ್ಷಾಚರಣೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೇಂಗ್ ನಾಡಿನ ಬೆಟ್ಟತ್ತೂರು ಗ್ರಾಮದಲ್ಲಿ ಉಳುಮೆ ಮಾಡುವ ಮೂಲಕ ಚಾಲನೆ ನೀಡಿತು.

ಗ್ರಾಮದ ಕೃಷಿಕ ಕೂಪದಿರ ಎನ್.ಮೋಹನ್ ಅವರ ಗದ್ದೆಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಜೋಡೆತ್ತು ಮೂಲಕ ಗದ್ದೆ ಉಳುಮೆ ಮಾಡಿ ಭೂಮಿಗೆ ನಮನ ಸಲ್ಲಿಸಿದರು.

ಎಡ್ಮಾö್ಯರ್ ೧ ಏ.೧೪ ರಂದು ಆದರೂ ಕೊಡವ ಸಂಪ್ರದಾಯದAತೆ ಕೊಡವರು ಸೋಮವಾರದಂದು ಎತ್ತುಗಳಿಂದ ಉಳುಮೆ ಮಾಡುವುದಿಲ್ಲ. ಈ ಕಾರಣಕ್ಕಾಗಿ ಒಂದು ದಿನ ಮುಂಚಿತವಾಗಿ ಉಳುಮೆ ಮಾಡಿ ಕೊಡವ ಬುಡಕಟ್ಟು ಜನಾಂಗ ಭೂಮಿ ಮತ್ತು ಪ್ರಕೃತಿಯೊಂದಿಗೆ ಹೊಂದಿರುವ ಅವಿನಾಭಾವ ಸಂಬAಧದ ಕುರಿತು ಸಾಕ್ಷೀಕರಿಸಲಾಯಿತು ಎಂದು ಎನ್.ಯು.ನಾಚಪ್ಪ ತಿಳಿಸಿದರು.ಕೂಪದಿರ ಕುಟುಂಬದ ಅಧ್ಯಕ್ಷೆ ಕೂಪದಿರ ಪುಷ್ಪಾ ಮುತ್ತಪ್ಪ, ಪ್ರಮುಖರಾದ ಕೂಪದಿರ ಗಂಗವ್ವ, ಕೂಪದಿರ ಕಾವೇರಿಯಮ್ಮ, ಕೂಪದಿರ ಭವ್ಯಾ ಮಾಚಯ್ಯ, ಕೂಪದಿರ ನಯನಾ ಯಶವಂತ, ಪಟ್ಟಮಾಡ ಕುಶ, ಕೂಪದಿರ ಮೋಹನ್, ಮಂದಪAಡ ಮನೋಜ್, ರೋಷನ್, ಕೂಪದಿರ ಪ್ರಣಾಮ್, ಯಶವಂತ ಕುಮಾರ್ ಮತ್ತಿತರರು ಗದ್ದೆ ಉಳುಮೆ ಸಂದರ್ಭ ಹಾಜರಿದ್ದರು.

ಇಂದು ಪಂಜಿನ ಮೆರವಣಿಗೆ

ಎಡ್ಮಾö್ಯರ್ ೧ ಹೊಸ ವರ್ಷಾಚರಣೆ ಪ್ರಯುಕ್ತ ಸಿಎನ್‌ಸಿ ಸಂಘಟನೆ ವತಿಯಿಂದ ಏ.೧೪ ರಂದು ಸಂಜೆ ೬.೩೦ ಗಂಟೆಗೆ ಗೋಣಿಕೊಪ್ಪಲಿನ ಆರ್‌ಎಂಸಿ ಯಾರ್ಡ್ನಿಂದ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.