ಗೋಣಿಕೊಪ್ಪಲು, ಏ.೧೩: ಪಾಲಿಬೆಟ್ಟ ಟಾಟ ಕಾಫಿ ಮೈದಾನದಲ್ಲಿ ಕೂರ್ಗ್ ಕ್ರಿಕೆಟ್ ಫೌಂಡೆಷನ್ ವತಿಯಿಂದ ಆಯೋಜಿತ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವೆಸ್ಟರ್ನ್ ಘಾಟ್ ವಾರಿರ‍್ಸ್ ಚಾಂಪಿಯನ್ ಪಟ್ಟ ಮುಡಿಗೇರಿಸಿ ಕೊಂಡಿತು. ಟೀಂ ಲಿವರೆಜ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

೧೩ ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಅಂತಿಮ ಸುತ್ತಿಗೆ ವೆಸ್ಟರ್ನ್ ಘಾಟ್ ವಾರಿಯರ್ಸ್ ಹಾಗೂ ಟೀಮ್ ಲಿವರೇಜ್ ತಂಡ ಪ್ರವೇಶ ಪಡೆದವು.

ಅಂತಿಮ ಹಣಾಹಣಿಯಲ್ಲಿ ವೆಸ್ಟರ್ನ್ ಘಾಟ್ ವಾರಿಯರ್ಸ್ ಟಾಸ್ ಗೆಲ್ಲುವ ಮೂಲಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ ೨೦ ಓವರ್‌ನಲ್ಲಿ ೯ ವಿಕೆಟ್ ಕಳೆದುಕೊಂಡು ೧೨೫ ರನ್ ಗಳಿಸಿತು. ಟೀಮ್ ಲಿವರೆಜ್ ತಂಡವು ಆರಂಭದಲ್ಲಿ ಉತ್ತಮ ರನ್ ಕಲೆ ಹಾಕುವ ಪ್ರಯತ್ನ ನಡೆಸಿತಾದರೂ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಅಂತಿಮವಾಗಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ೯೬ ರನ್‌ಗಳಿಸಲಷ್ಟೆ ಶಕ್ತವಾಯಿತು. ೩೦ ರನ್‌ಗಳ ಅಂತರಲ್ಲಿ ಜಯಗಳಿಸಿದ ವೆಸ್ಟರ್ನ್ ಘಾಟ್ ವಾರಿಯರ್ಸ್ ತಂಡವು ಚಾಂಪಿಯನ್ ಪಟ್ಟ ಪಡೆದು ವಿಜಯದ ನಗೆ ಬೀರಿತು.

ಪಾಲಿಬೆಟ್ಟ ಟಾಟಾ ಕಾಫಿ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಕ್ರಿಕೆಟ್ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವೈಯಕ್ತಿಕ ಪ್ರಶಸ್ತಿ ವಿಜೇತರು

ಮ್ಯಾನ್ ಅಫ್ ದಿ ಮ್ಯಾಚ್ ಪ್ರಶಸ್ತಿಯನ್ನು ವೆಸ್ಟರ್ನ್ ಘಾಟ್ ವಾರಿಯರ್ಸ್ ತಂಡದ ಆಟಗಾರ ಅಪ್ಪನೆರವಂಡ ಲೋಚನ್ ಅಪ್ಪಣ್ಣ ಪಡೆದುಕೊಂಡರು. ಮ್ಯಾನ್ ಆಫ್ ದಿ ಸೀರಿಸ್ ಟೀಮ್ ಲೆವರೇಜ್ ತಂಡದ ಆಟಗಾರ ತೀತಮಾಡ ಡೆಲ್ವಿನ್, ಅತ್ಯುತ್ತಮ ಆಲ್‌ರೌಂಡರ್ ಚೋನಿರ ಅಯ್ಯಪ್ಪ, ಅತ್ಯುತ್ತಮ ವಿಕೆಟ್ ಕೀಪರ್ ಶಾಂತೆಯAಡ ಲೂಥನ್, ಅತ್ಯುತ್ತಮ ಬ್ಯಾಟ್ಸ್ಮನ್ ಮೊಳ್ಳೇರ ಧ್ಯಾನ್ ಅಯ್ಯಪ್ಪ, ಅತ್ಯುತ್ತಮ ಬೌಲರ್ ಬೊಳ್ಳೇರ ದಿಶಾನ್ ಕುಟ್ಟಯ್ಯ, ಅತಿ ಹೆಚ್ಚು ವಿಕೆಟ್ ಪಡೆದವರು ನೂರೇರ ಶರಣ್ ಸೋಮಣ್ಣ, ಅಂತಿಮ ಪಂದ್ಯದ ಪುರುಷೋತ್ತಮ ಅಪ್ಪನೆರವಂಡ ಲೋಚನ್ ಅಪ್ಪಣ್ಣ, ಅತ್ಯುತ್ತಮ ಫೀಲ್ಡರ್ ಮಣವಟ್ಟಿರ ಥರನ್, ಅತ್ಯುತ್ತಮ ಕ್ಯಾಚ್ ಮುಕ್ಕಾಟೀರ ದೇವ್ ಚೆಂಗಪ್ಪ, ಉದಯೋನ್ಮುಖ ಆಟಗಾರ ಕೇಳೇಟ್ಟಿರ ಸ್ಕಂದ, ಶ್ರೇಷ್ಠ ಮಹಿಳಾ ಆಟಗಾರರು ಪ್ರಶಸ್ತಿಯನ್ನು ಕಂಬೀರAಡ ಹನ ಹಾಗೂ ಕಾಯಪಂಡ ಯಾನ ಪಡೆದುಕೊಂಡರು. ಹಿರಿಯ ಆಟಗಾರÀರಾಗಿ ಗಮನ ಸೆಳೆದ ಮಚ್ಚಮಾಡ ಬೋಪಣ್ಣ ಅವರನ್ನು ಗೌರವಿಸಲಾಯಿತು.

ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಯಿತು.

ಆರೋಗ್ಯಕರ ಜೀವನಕ್ಕೆ ಕ್ರೀಡೆ ಸಹಕಾರಿ : ಎ.ಎಸ್.ಪೊನ್ನಣ್ಣ

: ಯುವ ಸಮೂಹ ಹಾದಿ ತಪ್ಪುವುದನ್ನು ತಪ್ಪಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾಕೂಟಗಳು ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿರುವುದಲ್ಲದೆ ಉತ್ತಮ ಬದುಕು ಕಟ್ಟಿಕೊಟ್ಟಿವೆ ಎಂದರು. ಕ್ರೀಡೆಗಳು ಯುವ ಸಮೂಹವನ್ನು ಉತ್ತಮ ಮಾರ್ಗದಲ್ಲಿ ಕೊಂಡೊ ಯ್ಯುತ್ತವೆ ಮತ್ತು ಆರೋಗ್ಯವನ್ನು ಕಾಪಾಡುತ್ತದೆ. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಹೆಚ್ಚು ಹೆಚ್ಚು ಕ್ರೀಡಾಕೂಟಗಳು ನಡೆಯುವುದರಿಂದ ಕೊಡಗಿನ ಆಟಗಾರರಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಜನಪ್ರಿಯ ಕ್ರೀಡೆಯಾಗಿರುವ ಕ್ರಿಕೆಟ್‌ಗೆ ಜಿಲ್ಲೆಯಲ್ಲಿ ಉತ್ತೇಜನ ನೀಡುತ್ತಿರುವುದು ಸ್ವಾಗತಾರ್ಹ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ಯುವ ಸಮೂಹವನ್ನು ಉತ್ತೇಜಿಸಲು ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಪರಿಶ್ರಮದಿಂದ ಆಯೋಜಿಸಿದೆ. ಈ ಬಾರಿಯ ಸೀಸನ್-೨ ರಲ್ಲಿ ದೊಡ್ಡ ಸಂಖ್ಯೆಯಲ್ಲಿ ಆಟಗಾರರು ಪಾಲ್ಗೊಂಡಿರುವುದು ಶ್ಲಾಘನೀಯ. ಕೂರ್ಗ್ ಕ್ರಿಕೆಟ್ ಫೌಂಡೇಶನ್‌ನ ಪ್ರಯತ್ನಕ್ಕೆ ನನ್ನ ಸಂಪೂರ್ಣ ಪ್ರೋತ್ಸಾಹವಿದೆ ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂರ್ಗ್ ಕ್ರಿಕೆಟ್ ಫೌಂಡೇಶನ್‌ನ ಅಧ್ಯಕ್ಷ ಪೊರುಕೊಂಡ ಸುನಿಲ್ ಅವರು, ಕೊಡಗಿನಲ್ಲಿ ಲೆದರ್ ಬಾಲ್ ಕ್ರಿಕೆಟ್ ಕ್ರೀಡೆಯನ್ನು ಉತ್ತೇಜಿಸುವ ಮತ್ತು ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಲೆದರ್‌ಬಾಲ್ ಪ್ರೀಮಿಯರ್ ಲೀಗ್‌ನ್ನು ನಡೆಸಿಕೊಂಡು ಬರಲಾಗುತ್ತಿದೆ. ಲೆದರ್ ಬಾಲ್ ಕ್ರಿಕೆಟ್‌ಗೆ ಜಿಲ್ಲೆಯ ಯುವ ಸಮೂಹವನ್ನು ಸೆಳೆಯುವುದು ನಮ್ಮ ಕನಸಾಗಿತ್ತು, ಅದು ನನಸಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮಾಜಿ ಹಾಕಿ ಒಲಿಂಪಿಯನ್ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಸುಬ್ರಮಣಿ ಅವರು ಮಾತನಾಡಿ ದಾನಿಗಳ ಸಹಕಾರವಿದ್ದರೆ ಮಾತ್ರ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯ, ಇದರೊಂದಿಗೆ ಯುವ ಸಮೂಹಕ್ಕೆ ಪ್ರೋತ್ಸಾಹದ ಅಗತ್ಯವೂ ಇದೆ ಎಂದರು. ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮತ್ತಷ್ಟು ನಡೆದು ಜಿಲ್ಲೆಯ ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಆಡುವಂತಾಗಲಿ ಎಂದು ಕರೆ ನೀಡಿದರು.

ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಶನ್ ಅಪ್ಪಚ್ಚು ಮಾತನಾಡಿ, ಕೊಡಗಿನಲ್ಲಿ ಕ್ರೀಡಾ ಸುಗ್ಗಿಯೇ ನಡೆಯುತ್ತಿದೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅಗತ್ಯ ಪ್ರೋತ್ಸಾಹ ಮತ್ತು ಸಹಕಾರ ದೊರೆಯುತ್ತಿದೆ ಎಂದು ಹೇಳಿದರು.

ಕೂರ್ಗ್ ಕ್ರಿಕೆಟ್ ಫೌಂಡೇಶನ್‌ನ ಮುಖ್ಯ ಮಾರ್ಗದರ್ಶಕ ಚೇರಂಡ ಕಿಶನ್ ಮಾದಪ್ಪ ಅವರು ಮಾತನಾಡಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಆಯೋಜನೆ ಸಾಧಾರಣ ಕಾರ್ಯವಲ್ಲ, ಇದರ ಹಿಂದೆ ಸಮಾನ ಮನಸ್ಕರ ಕನಸು ಮತ್ತು ಶ್ರಮವಿದೆ. ಕೊಡಗಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕೆಲಸವನ್ನು ಕೂರ್ಗ್ ಕ್ರಿಕೆಟ್ ಫೌಂಡೇಶನ್ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತಷ್ಟು ಕ್ರೀಡಾಕೂಟಗಳು ಆಯೋಜನೆಗೊಂಡು ಕೊಡಗಿನ ಕ್ರೀಡಾಪ್ರತಿಭೆಗಳಿಗೆ ಅವಕಾಶ ಲಭಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಕ್ಯೂರೆಮಾರ್ವೆಲ್ ನಿರ್ದೇಶಕಿ ಪಾಲಚಂಡ ಪೂಜಿತಾ ಉತ್ತಪ್ಪ ಅವರು ಮಾತನಾಡಿ ಶುಭ ಹಾರೈಸಿದರು.

ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ, ಉದ್ಯಮಿ ಕುಪ್ಪಂಡ ಚಿಣ್ಣಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ಉಪಾಧ್ಯಕ್ಷ ಪಾಲಚಂಡ ಜಗನ್ ಉತ್ತಪ್ಪ, ಪಂದ್ಯಾವಳಿಯ ಸಂಚಾಲಕ ಚಂಡೀರ ರಚನ್ ಚಿಣ್ಣಪ್ಪ, ವ್ಯವಸ್ಥಾಪಕ ಚೆರುಮಂದAಡ ಸೋಮಣ್ಣ, ನಿರ್ದೇಶಕರಾದ ಮಡ್ಲಂಡ ದರ್ಶನ್ ಪೆಮ್ಮಯ್ಯ, ಕೀತಿಯಂಡ ಗಣಪತಿ, ಅಣ್ಣಳಮಾಡ ರಾಯ್ ಚಿಣ್ಣಪ್ಪ, ಕುಲ್ಲೇಟಿರ ಶಾಂತ ಕಾಳಪ್ಪ, ಬಲ್ಲಂಡ ರೇಣ ಮತ್ತಿತರರು ಉಪಸ್ಥಿತರಿದ್ದರು.

-ಹೆಚ್.ಕೆ. ಜಗದೀಶ್