ಗೋಣಿಕೊಪ್ಪಲು, ಏ. ೧೩: ಗೋಣಿಕೊಪ್ಪಲುವಿನ ಬ್ರೆöÊನೋಬ್ರೆöÊನ್ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭವು ನಗರದ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜರುಗಿತು.ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನವನ್ನು ನೀಡಲಾಯಿತು.

ಇತ್ತೀಚೆಗೆ ಅಂತರರಾಷ್ಟಿçÃಯ ಸ್ಪರ್ಧೆಯಲ್ಲಿ ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುತ್ತಿರುವ ರೂಪ ಯತಿರಾಜ್ ಅಧ್ಯಕ್ಷತೆಯಲ್ಲಿ ಜರುಗಿದ ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಸದಸ್ಯರಾದ ಬಿ.ಎನ್.ಪ್ರಕಾಶ್ ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಬ್ರೆöÊನೋ ಬ್ರೆöÊನ್ ಸಂಸ್ಥೆ ಉತ್ತಮ ವೇದಿಕೆ ಕಲ್ಪಿಸುತ್ತಿದೆ. ಕಳೆದ ೧೫ ವರ್ಷಗಳಿಂದ ಸ್ಥಳೀಯ ಮಕ್ಕಳ ಪ್ರತಿಭೆಗಳಿಗೆ ಅವಕಾಶ ನೀಡಿದೆ. ಸಂಸ್ಥೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕಲಿಕಾ ಕ್ರಮಗಳನ್ನು ಆಸಕ್ತಿಯಿಂದ ನಿರ್ವಹಿಸುತ್ತಿರುವುದು ಇವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿದಂತಾಗುತ್ತಿದೆ. ಪೋಷಕರು ಇಂತಹ ಸಂಸ್ಥೆಯ ಪ್ರಯೋಜನವನ್ನು ತಮ್ಮ ಮಕ್ಕಳಿಗೆ ಕೊಡಿಸುವಂತಾದಲ್ಲಿ ಮಕ್ಕಳಿಗೆ ಉತ್ತಮ ಅವಕಾಶಗಳು ನೀಡಿದಂತಾಗುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರೆöÊನೋ ಬ್ರೆöÊನ್‌ನ ಮುಖ್ಯಸ್ಥರಾದ ಬೆಂಗಳೂರಿನ ನೀಲ್ ಕಮಲ್ ಸ್ವರ್ಣಕರ್ ಮಾತನಾಡಿ ಸಂಸ್ಥೆಯು ಅಂತರಾಷ್ಟಿçÃಯ ಮಟ್ಟದಲ್ಲಿ ಹೆಸರುಗಳಿಸಿದ್ದು ಸಾವಿರಾರು ಶಾಖೆಗಳನ್ನು ಹೊಂದಲಾಗಿದೆ. ಮಕ್ಕಳಲ್ಲಿರುವ ಜ್ಞಾಪಕ ಶಕ್ತಿಯನ್ನು ವೃದ್ದಿಸುವ ಸಲುವಾಗಿ ಸಂಸ್ಥೆಯು ಕೆಲಸ ನಿರ್ವಹಿಸುತ್ತಿದೆ. ಮಕ್ಕಳ ಕಲಿಕಾ ವ್ಯವಸ್ಥೆಗೆ ಪೂರಕ ವಾತಾವರಣ ನೀಡಲಾಗುತ್ತಿದೆ. ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಮಕ್ಕಳು ಸಾಧನೆ ಮಾಡುತ್ತಿದ್ದಾರೆ. ತಮ್ಮ ಜ್ಞಾಪಕ ಶಕ್ತಿಯನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ ಎಂದರು.

ಸAಸ್ಥೆ ಮುಖ್ಯಸ್ಥೆ ರೂಪ ಯತಿರಾಜ್ ಮಾತನಾಡಿ ಆರಂಭದಿAದಲೂ ಕಲಿಕೆಯಲ್ಲಿ ಇಲ್ಲಿಯ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮ ಅವಕಾಶವಾಗುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಅಂತರರಾಷ್ಟಿçÃಯ ಮಟ್ಟದಲ್ಲಿ ಭಾಗವಹಿಸುವ ಮೂಲಕ ವಿಜೇತರಾಗಿದ್ದಾರೆ. ಮಕ್ಕಳನ್ನು ಅವರ ಸಾಮರ್ಥ್ಯಕ್ಕೆ ಸರಿಯಾಗಿ ಜ್ಞಾನಾರ್ಜನೆಯನ್ನು ಮಾಡಿಕೊಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜ್ ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಮಕ್ಕಳ ಕಲಿಕೆಯ ಬಗ್ಗೆ ವಿಚಾರ ವಿನಿಮಯ ನಡೆಯಿತು. ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕಿ ರೂಪ ಯತಿರಾಜ್ ಸ್ವಾಗತಿಸಿ ವಂದಿಸಿದರು.