ಸೋಮವಾರಪೇಟೆ, ಏ. ೧೪: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತಾ. ೧೬ ರಂದು ಸಂಕಪ್ಪ ಹಾಲ್‌ನಲ್ಲಿ ನಡೆಯಲಿದೆ ಎಂದು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಜ್ಯೋತಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯೂ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಾ.ಮಂತರ್‌ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಿವೈಎಸ್‌ಪಿ ಗಂಗಾಧರಪ್ಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಕೊಡಗು ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳಾದ ಜಿಮ್ಮಿ ಸಿಕ್ಷೇರಾ, ಪದ್ಮಶ್ರೀ ರಾಣಿ ಮಾಚಯ್ಯ, ವಸಂತಿ, ಎಚ್.ಆರ್.ಮುತ್ತಪ್ಪ, ಟಿ.ಎಂ.ಮುದ್ದಯ್ಯ, ಕೆ.ಯು.ರಂಜಿತ್, ಮೈಥಿಲಿರಾವ್, ಪ್ರೇಮ್‌ಕುಮಾರ್, ಸುಲೋಚನಾ, ಯು.ಸಿ.ದಮಯಂತಿ, ಸ್ಥಳೀಯ ಸಂಸ್ಥೆಯ ಎಸ್.ಡಿ.ವಿಜೇತ್ ಭಾಗವಹಿಸಲಿದ್ದಾರೆ.