ಕಣಿವೆ, ಏ. ೧೪: ಯಡವನಾಡು ಗ್ರಾಮದಲ್ಲಿರುವ ಶ್ರೀ ಶಿವಬಸವೇಶ್ವರ ದೇಗುಲದ ಆವರಣದಲ್ಲಿ ನೂತನವಾಗಿ ಪಾರ್ವತಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಇದಕ್ಕೂ ಮುನ್ನಾ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಜರುಗಿದವು. ಸೋಮವಾರಪೇಟೆಯ ಜಗದೀಶ್ ಉಡುಪ ನೇತೃತ್ವದಲ್ಲಿ ಪೂಜಾ ವಿಧಿಗಳು ಸಾಗಿದವು. ದೇವಾಲಯದ ಅರ್ಚಕ ಸುಧೀಂದ್ರ, ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಡಿ.ಪಿ. ಕುಟ್ಟಪ್ಪ, ಕಾರ್ಯದರ್ಶಿ ಭಾನುಪ್ರಕಾಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.