ಪೊನ್ನಂಪೇಟೆ, ಏ. ೧೪: ಮುಸ್ಲಿಮರ ಧಾರ್ಮಿಕ ಸ್ವಾತಂತ್ರ‍್ಯಕ್ಕೆ ಸಂಬAಧಿಸಿದAತೆ ಸಂವಿಧಾನದಲ್ಲಿ ಒದಗಿಸಲಾಗಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಅಂಗೀಕರಿಸಿದೆ. ಮುಸ್ಲಿಮರಲ್ಲಿ ಅಸುರಕ್ಷತೆಯನ್ನು ಮೂಡಿಸುವ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ತೀವ್ರವಾಗಿ ವಿರೋಧಿಸುವುದಾಗಿ ಹೇಳಿದೆ. ಈ ಕುರಿತು ಸಂಸ್ಥೆಯ ಪರವಾಗಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ, ೨೦೨೪ರ ಆಗಸ್ಟ್ನಲ್ಲಿ ಸಂಸತ್ತಿನಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ತೀವ್ರ ವಿರೋಧದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿಯ ಪರಿಶೀಲನೆಗೆ ನೀಡಲಾಗಿತ್ತು. ಆದರೆ ನಂತರ ಮುಸ್ಲಿಂ ಸಂಘಟನೆಗಳು ಮತ್ತು ವಿರೋಧ ಪಕ್ಷಗಳ ಪ್ರತಿನಿಧಿಗಳು ಸೂಚಿಸಿದ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿ, ಮೊದಲಿಗಿಂತಲೂ ಅಪಾಯಕಾರಿ ಅಂಶಗಳನ್ನು ಮಸೂದೆಯಲ್ಲಿ ಸೇರಿಸಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಲಾಗಿದೆ. ಇದು ಭಾರತದ ಪ್ರಜಾಪ್ರಭುತ್ವದ ಆಶಯಕ್ಕೆ ಮಾರಕವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈವರೆಗೆ ವಕ್ಫ್ ಆಸ್ತಿಯನ್ನು ನಿಗದಿ ಪಡಿಸಲು ಸರ್ಕಾರವು ಇಸ್ಲಾಮಿಕ್ ಕಾನೂನು ಮತ್ತು ವಕ್ಫ್ ವಿಷಯಗಳಲ್ಲಿ ಪರಿಣಿತಿ ಇರುವ ಒಬ್ಬ ಸ್ವಾಯತ್ತ ಸರ್ವೆಯರ್ ಅನ್ನು ನೇಮಿಸುತ್ತಿತ್ತು. ಆದರೆ ನೂತನ ತಿದ್ದುಪಡಿ ಪ್ರಕಾರ ಆ ಎಲ್ಲಾ ಜವಾಬ್ದಾರಿಗಳನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ. ವಕ್ಫ್ ಕುರಿತ ತಕರಾರುಗಳನ್ನು ಇತ್ಯರ್ಥ ಮಾಡುವ ವಕ್ಫ್ ಟ್ರಿಬ್ಯುನಲ್‌ಗೆ ನೇಮಕವಾಗುವ ಸರ್ಕಾರಿ ಅಧಿಕಾರಿ ಮುಸ್ಲಿಂಮನಾಗಿರಬೇಕೆAಬ ಷರತ್ತನ್ನೂ ಹೊಸ ಮಸೂದೆ ತೆಗೆದು ಹಾಕಿದೆ. ಅಲ್ಲದೆ ವಕ್ಫ್ ಬೋರ್ಡಿನಲ್ಲಿ ಕಡ್ಡಾಯವಾಗಿ ಇಬ್ಬರು ಮುಸ್ಲಿಂಮೇತರರನ್ನು ನೇಮಿಸಬೇಕೆಂದು ಬದಲಿಸಲಾಗಿದೆ. ಹಿಂದೂ ಅಥವಾ ಸಿಖ್ ದೇವಸ್ಥಾನಗಳ ನೇಮಕವಾಗುವ ಸರ್ಕಾರಿ ಅಧಿಕಾರಿಯು ಆಯಾ ಧರ್ಮೀಯರೇ ಅಗಿರಬೇಕೆಂಬ ಕಾನೂನು ಜಾರಿಯಲ್ಲಿದ್ದು, ವಕ್ಫ್ ನಿಂದ ಮಾತ್ರ ಈ ಕಾನೂನನ್ನು ಕೈ ಬಿಡುವ ಉದ್ದೇಶವಾದರೂ ಏನು? ಎಂದು ಪ್ರಶ್ನಿಸಿದರಲ್ಲದೆ, ಹೀಗೆ ತಿದ್ದುಪಡಿ ಮಾಡಿರುವ ಈ ಅಂಗೀಕೃತ ಮಸೂದೆಯು ಹಲವಾರು ಅನ್ಯಾಯಕಾರಿ ಅಂಶಗಳನ್ನು ಒಳಗೊಂಡಿದ್ದು, ಇದು ಕೇಂದ್ರ ಸರ್ಕಾರದ ಮುಸ್ಲಿಮರ ವಿರುದ್ಧದ ಧಾರ್ಮಿಕ ಸ್ವಾತಂತ್ರ‍್ಯದ ದಾಳಿಯ ಭಾಗವಾಗಿದೆ ಎಂದು ಸೂಫಿ ಹಾಜಿ ಹೇಳಿದ್ದಾರೆ.

ಗೋಷ್ಠಿಯಲ್ಲಿದ್ದ ಕೊಡವ ಮುಸ್ಲಿಂ ಅಸೋಸಿಯೇಷನ್ ಹಿರಿಯ ಉಪಾಧ್ಯಕ್ಷರಾದ ಡಾ. ಜೋಯಿಪೆರ ಎ. ಕುಂಜ್ಹಬ್ದುಲ್ಲಾ ಮಾತನಾಡಿ, ಜಂಟಿ ಸಂಸದೀಯ ಸಮಿತಿಯ ಮುಂದೆ ೯೮ ಲಕ್ಷದಷ್ಜು ಲಿಖಿತ ಮನವಿಗಳು ಬಂದಿದ್ದು, ಅದರಲ್ಲಿ ಬಹುಪಾಲು ಈ ತಿದ್ದುಪಡಿಗಳನ್ನು ವಿರೋಧಿಸುವುವೇ ಆಗಿತ್ತು. ಆದಾಗ್ಯೂ ಸರ್ಕಾರವು ವಿರೋಧ ಪಕ್ಷಗಳು ಸಲ್ಲಿಸಿದ್ದ ಆಕ್ಷೇಪಣೆಗಳನ್ನೂ ನಿರ್ಲಕ್ಷಿಸಿ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಪ್ರವೃತ್ತಿ ತೋರಿ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಅಕ್ಕಳತಂಡ ಎಸ್. ಮೊಯ್ದು ಉಪಸ್ಥಿತರಿದ್ದರು.