ಕುಶಾಲನಗರ, ಏ. ೧೪: ಕುಶಾಲನಗರ ಪಟ್ಟಣದ ರಾಧಾಕೃಷ್ಣ ಬಡಾವಣೆಯ ನಿವಾಸಿ ತರಕಾರಿ ವ್ಯಾಪಾರಿ ಕೆ.ಆರ್. ಮಂಜುನಾಥ್ (೪೨) ನಾಪತ್ತೆಯಾಗಿದ್ದಾರೆ ಎಂದು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಹುಣಸೂರಿಗೆ ತರಕಾರಿ ವ್ಯಾಪಾರಕ್ಕೆ ತೆರಳಿದ ತನ್ನ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸರಿತಾ ಕುಶಾಲನಗರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪತ್ತೆ ಹಚ್ಚಿಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಯಾರಿಗಾದರೂ ಮಾಹಿತಿ ಲಭಿಸಿದಲ್ಲಿ ಕುಶಾಲನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.