ಮುಳ್ಳೂರು, ಏ. ೧೪: ಸಮಿಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ, ಕಲಾ ಮತ್ತು ಬಿಸಿಎ ವಿಭಾಗದ ವತಿಯಿಂದ ‘ಸಂಯುಕ್ತ ೨ಕೆ೨೫’ ಸ್ಪರ್ಧಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ವಿ.ಶಂಭುಲಿAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಪರ್ಧಾತ್ಮಕ ಕಾರ್ಯಕ್ರಮದ ಉದ್ದೇಶ, ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲ ಮುಂತಾದ ವಿಷಯಗಳ ಕುರಿತು ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರAಜನ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಎಸ್.ಪರಮೇಶ್, ವಿದ್ಯಾಸಂಸ್ಥೆ ನಿರ್ದೇಶಕರಾದ ಬಿ.ಕೆ.ಯತೀಶ್, ಯು.ವಿ.ಶಿವಪ್ರಸಾದ್ ಮುಂತಾದವರು ಹಾಜರಿದ್ದರು. ಸಂಯುಕ್ತ ೨ಕೆ೨೫ ಸ್ಪರ್ಧಾತ್ಮಕ ಕಾರ್ಯಕ್ರಮದಲ್ಲಿ ಕೊಡಗಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಾಣಿಜ್ಯ, ಕಲಾ ಮತ್ತು ಬಿಸಿಎ ವಿಭಾಗಕ್ಕೆ ಸಂಬAಧಪಟ್ಟAತೆ ನಡೆದ ಸ್ಪರ್ಧಾತ್ಮಕ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಶಿಕ್ಷಕ ಡಿ.ಪಿ.ಸತೀಶ್, ಹಾಸನ ವಿದ್ಯಾಸೌಧ ಕಾಲೇಜಿನ ಉಪನ್ಯಾಸಕಿ ವೀಣಾ ಮಂಜುನಾಥ್, ಚಿಕ್ಕಳುವಾರ ಕೊಡಗು ವಿಶ್ವವಿದ್ಯಾನಿಲಯದ ಉಪನ್ಯಾಸಕಿ ಗೀತಾಂಜಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.