ವೀರಾಜಪೇಟೆ, ಏ. ೧೪: ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ ಪೂಜಾ ಕಾರ್ಯ ಶ್ರದ್ಧಾ ಭಕ್ತಿಯಿಂದ ನಡೆಯಿತು.

ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆ ಗಣಪತಿ ಹೋಮ, ಪ್ರಧಾನ ಕಳಶ ಪೂಜೆ, ವಿಷ್ಣು ಸಹಸ್ರನಾಮ, ತುಳಸಿ ಅರ್ಚನೆ, ವಿಶೇಷ ಪೂಜೆಗಳು ನಡೆದು ಕಳಶ ಅಭಿಷೇಕ, ಸತ್ಯನಾರಾಯಣ ಪೂಜೆ ನಂತರ, ದೇವರ ಉತ್ಸವ ಮೂರ್ತಿ ದೇವಸ್ಥಾನದ ಪ್ರದಕ್ಷಿಣೆ ನಡೆಯಿತು. ಬಳಿಕ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಪ್ರಸಾದÀ ವಿನಿಯೋಗ ನಂತರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ವೇಳೆ ದೇವಸ್ಥಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದಲೂ ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.