ವೀರಾಜಪೇಟೆ, ಏ. ೧೪: ವೀರಾಜಪೇಟೆ ತಾಲೂಕು ಬಿಟ್ಟಂಗಾಲ ಬಾಳುಗೋಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬನ ಕಾಲಿಗೆ ಬಲವಾದ ಪೆಟ್ಟು ಬಿದ್ದು, ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನೋವಾ ಕಾರು ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು ಇನೋವಾ ಕಾರಿನಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಪ್ರಯಾಣಿಸುತ್ತಿದ್ದರು. ಬೈಕ್ ಸವಾರರಿಬ್ಬರೂ ವೀರಾಜಪೇಟೆ ಸುತ್ತಮುತ್ತಲಿನ ಗ್ರಾಮದವರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.