ಕೂಡಿಗೆ, ಏ. ೧೫: ಕೂಡಿಗೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಭಾರಿ ಗಾಳಿ ಸಹಿತ ಮಳೆಗೆ ದರ್ಶನ್ ಎಂಬವರ ಮನೆಯ ಸಿಮೆಂಟ್ ಶೀಟ್ಗಳು, ಗೃಹೋಪಯೋಗಿ ವಸ್ತು ಸೇರಿದಂತೆ ಸಂಗ್ರಹ ಮಾಡಲಾಗಿದ್ದ ಭತ್ತ ಹಾನಿಯಾಗಿದೆ.
ಅಲ್ಲದೆ ಕೂಡಿಗೆಯಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮವಾಗಿ ವಿದ್ಯುತ್ ಕಂಬಗಳು ಹಾನಿಯಾಗಿದೆ. ಸಂಬAಧಿಸಿದ ಇಲಾಖೆಯವರು ಸ್ಥಳ ಪರಿಶೀಲನೆ ನಡೆಸಿ ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು- ಹಾರಂಗಿಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮವಾಗಿ ಕುಶಾಲನಗರ ಹಾರಂಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು ಕುಶಾಲನಗರ ಅಗ್ನಿ ಶಾಮಕ ಸಿಬ್ಬಂದಿ ವರ್ಗದವರು ಮರವನ್ನು ಕತ್ತರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.