ವೀರಾಜಪೇಟೆ, ಏ. ೧೫: ವೀರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನೂತನವಾಗಿ ಆರಂಭಗೊAಡ, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರ ಕಚೇರಿ ಉದ್ಘಾಟನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೆರವೇರಿಸಿದರು.

ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಅರಣ್ಯ ಹಾಗೂ ಮಾನವ-ಪ್ರಾಣಿ ಸಂಘರ್ಷದAತಹ ತೊಂದರೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಕಚೇರಿಯ ಕಾರ್ಯ ವ್ಯಾಪ್ತಿಯು ಮಹತ್ವ ಪಡೆದುಕೊಂಡಿದೆ ಎಂದರು.

ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಎಂಎಲ್ಸಿ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರುಗಳು, ಪುರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭಾ ಸದಸ್ಯರು, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಶುಭ ಕೋರಿದರು.