ಭಾಗಮಂಡಲ, ಏ. ೧೫: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡು ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್ ಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಭಾಗಮಂಡಲದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ ವೈವಿಧ್ಯಮಯ ಕಾರ್ಯಕ್ರಮದೊಂದಿಗೆ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಅರೆಭಾಷೆ ಗೌಡ ಸಂಸ್ಕೃತಿ ಬಿಂಬಿಸುವ ಆಕರ್ಷಕ ಮೆರವಣಿಗೆ, ಬುದ್ದಿಗೆ ಕಸರತ್ತು ನೀಡುವ ರಸಪ್ರಶ್ನೆ ಸ್ಪರ್ಧೆ, ಸಾಂಪ್ರದಾಯಿಕ ವಸ್ತುಪ್ರದರ್ಶನ, ಸಾಧಕರಿಗೆ ಸನ್ಮಾನ, ಅರೆಭಾಷೆ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಗೌಡ ಜನಾಂಗದವರು ಸಂಭ್ರಮಿಸಿದರು. ಇದಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.

ಭಾಷೆ ಉಳಿದರೆ ಮಾತ್ರ ಸಂಸ್ಕೃತಿ ಉಳಿವು - ಪೊನ್ನಣ್ಣ

ಅರೆಭಾಷೆ ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಗಡಿನಾಡ ಉತ್ಸವಕ್ಕೆ ಚಾಲನೆ ನೀಡಿ ಕರೆ ನೀಡಿದರು.

ಅರೆಭಾಷಿಕರು ಸ್ವಾತಂತ್ರö್ಯ ಪೂರ್ವದಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಅಮರ ಸುಳ್ಯ ಇತಿಹಾಸವು ಇದಕ್ಕೆ ಸಾಕ್ಷಿಯಾಗಿದೆ. ಆ ನಿಟ್ಟಿನಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದವರನ್ನು ಸದಾ ಸ್ಮರಿಸುವಂತಾಗಬೇಕು. ಮುಂದಿನ ಒಂದು ಶತಮಾನದಲ್ಲಿ ಕನ್ನಡ ಭಾಷೆ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತದೆ ಎಂಬ ಆತಂಕ ಎಲ್ಲೆಡೆ ಎದುರಾಗುತ್ತಿದೆ. ಆದ್ದರಿಂದ ಸ್ಥಳೀಯ ಭಾಷೆಗಳಾದ ಅರೆಭಾಷೆ, ಕೊಡವ, ತುಳು, ಕೊಂಕಣಿ, ಹೀಗೆ ಸಣ್ಣ ಸಣ್ಣ ಭಾಷೆಗಳನ್ನು ಉಳಿಸಿದ್ದಲ್ಲಿ, ಕನ್ನಡ ಭಾಷೆ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಮಾತೃ ಭಾಷೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ಜೀವನಕ್ಕೆ ಇತರೆ ಭಾಷೆ ಕಲಿಯುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ಅರೆಭಾಷಿಕರು ರಾಜಕೀಯ, ಸಾಹಿತ್ಯ, ಸಂಗೀತ, ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಡಿ.ವಿ.ಸದಾನಂದ ಗೌಡ, ಕೊಡಗು ಜಿಲ್ಲೆಯಲ್ಲಿ ವಿಧಾನಸಭಾ ಸದಸ್ಯರಾಗಿ ಡಿ.ಎಸ್.ಮಾದಪ್ಪ, ಚಿನ್ನಪ್ಪ, ಕೆ.ಜಿ.ಬೋಪಯ್ಯ ಕೆಲಸ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಹಲವು ಶತಮಾನಗಳಿಂದ ವಾಸಿಸಿಕೊಂಡು ಬಂದಿರುವ ಸಹೋದರತ್ವ, ಸಹಬಾಳ್ವೆ ಮತ್ತು ಭ್ರಾತೃತ್ವವನ್ನು ಮುಂದುವರೆಸಿಕೊAಡು ಹೋಗಬೇಕು. ಯಾವುದೇ ಬೇಧಭಾವ ಬಿನ್ನತೆ ಇಲ್ಲದೆ ಬದುಕು ಕಟ್ಟಿಕೊಳ್ಳಬೇಕು ಎಂದು ಪೊನ್ನಣ್ಣ ಅವರು ಸಲಹೆ ನೀಡಿದರು.

ಮತ್ತಷ್ಟು ಕಾರ್ಯಕ್ರಮ - ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಈಗಾಗಲೇ ಗಡಿನಾಡ ಉತ್ಸವವನ್ನು ಸುಳ್ಯದ ಬಂದಡ್ಕ, ಮಂಡೆಕೋಲು, ಹಾಗೆಯೇ ಚೆಯ್ಯಂಡಾಣೆ, ಕುಶಾಲನಗರ ಮತ್ತು ಭಾಗಮಂಡಲದಲ್ಲಿ ಹಮ್ಮಿಕೊಂಡು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಸಂಶೋಧನೆ ಮುಂದಿನ ಪೀಳಿಗೆಗೆ ತಿಳಿಸುವಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

(ಮೊದಲ ಪುಟದಿಂದ)

ಪರಸ್ಪರ ಗೌರವವಿರಬೇಕು - ಧರ್ಮಜ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಸ್ಪರ್ಧೆ ಎಲ್ಲಾ ರಂಗದಲ್ಲೂ ಇದೆ. ಆರೋಗ್ಯಯುತ ಸ್ಪರ್ಧೆ ಇದ್ದಾಗ ಗೆಲುವು ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಾಟ್ಸಾö್ಯಪ್ ಸಂದೇಶಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಗಮನಹರಿಸಬೇಕು. ಕೊಡಗು ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ವಾಸ ಮಾಡಿಕೊಂಡು ಬಂದಿರುವ ಎಲ್ಲರೂ ಅನ್ಯೋನ್ಯತೆಯಿಂದ ಬದುಕು ನಡೆಸಬೇಕು. ಯಾವುದೇ ಜಾತಿ, ಧರ್ಮ, ಭಾಷಿಕರನ್ನು ಗೌರವಿಸಬೇಕು. ಕಹಿಯನ್ನು ಮರೆತು ಸ್ನೇಹಿತರಂತೆ ಬದುಕು ನಡೆಸಬೇಕು ಎಂದು ಧರ್ಮಜ ಉತ್ತಪ್ಪ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ.ಕೋರನ ಸರಸ್ವತಿ ಪ್ರಕಾಶ್ ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸವಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಪರಂಪರೆಯನ್ನು ಉಳಿಸಿ ಕೊಂಡು ಹೋಗಬೇಕು ಎಂದರು.

ಭಾಗಮಂಡಲ ಗ್ರಾ.ಪಂ.ಅಧ್ಯಕ್ಷ ಕಾಳನ ರವಿ ಮಾತನಾಡಿ, ಅಕಾಡೆಮಿ ವತಿಯಿಂದ ಅರೆಭಾಷೆ ಗಡಿನಾಡ ಉತ್ಸವ ಆಯೋಜಿಸಿ ರುವುದು ಶ್ಲಾಘನೀಯವಾಗಿದೆ. ಇದಕ್ಕೆ ೨ ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದರು.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷÀ ಸೂರ್ತಲೆ ಸೋಮಣ್ಣ ಮಾತನಾಡಿ, ಅರೆಭಾಷೆ ಅಕಾಡೆಮಿ ಸ್ಥಾಪನೆಗೆ ಹಲವರು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಅಕಾಡೆಮಿ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳ ಲಾಗುತ್ತಿದ್ದು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಮಾತನಾಡಿ ಅರೆಭಾಷೆ ಐನ್‌ಮನೆ ಸಂಸ್ಕೃತಿ, ಸಾಂಸ್ಕೃತಿಕ ಸಮಾವೇಶ, ಹಿಂಗಾರ ತ್ರೆöÊಮಾಸಿಕ ಪತ್ರಿಕೆ ತರುವುದು, ಸಾಕ್ಷö್ಯಚಿತ್ರ ನಿರ್ಮಾಣ, ಆಕಾಶವಾಣಿಯಲ್ಲಿ ಸುದ್ದಿಜೊಂಪೆ ಸುದ್ದಿ ಪ್ರಸಾರ... ಹೀಗೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡು ಅರೆಭಾಷೆ ಸಂಸ್ಕೃತಿಯನ್ನು ಪಸರಿಸುವಲ್ಲಿ ಶ್ರಮಿಸಲಾಗಿದೆ ಎಂದು ತಿಳಿಸಿದರು.

ಅಕಾಡೆಮಿ ಮಾಜಿ ಅಧ್ಯಕ್ಷರಾದ ಲಕ್ಷಿö್ಮÃನಾರಾಯಣ ಕಜೆಗದ್ದೆ ಮಾತನಾಡಿ, ಕನ್ನಡ, ಇಂಗ್ಲೀಷ್, ಅರೆಭಾಷೆ ನಿಘಂಟು ಸೇರಿದಂತೆ ಹಲವು ಪುಸ್ತಕಗಳನ್ನು ಹೊರತರುವ ಮೂಲಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಎಲ್ಲೆಡೆ ಪಸರಿಸಲು ಶ್ರಮಿಸಲಾಗಿದೆ. ಐಎಸ್‌ಒ ಕೋಡ್ ಪಡೆಯಲು ಪ್ರಯತ್ನಿಸಲಾಗಿದೆ. ಹೀಗೆ ವಿವಿಧ ಚಟುವಟಿಕೆ ಕೈಗೊಳ್ಳುವ ಮೂಲಕ ಅರೆಭಾಷೆ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು ಎಂದರು.

ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ ಮಾತನಾಡಿ ಅರೆಭಾಷೆ ಗಡಿನಾಡ ಉತ್ಸವಕ್ಕೆ ಸಂಗಮದAತೆ ಇಂದಿನ ಕಾರ್ಯಕ್ರಮಕ್ಕೆ ಸೇರಿರುವುದು ಸಂತಸ ತಂದಿದೆ ಹರ್ಷ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನಾ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಭಾಗಮಂಡಲ ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ, ಕರಿಕೆ ಗೌಡ ಸಮಾಜದ ಅಧ್ಯಕ್ಷ ಕೋಡಿ ಪೊನ್ನಪ್ಪ, ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ನಿಡ್ಯಮಲೆ ಡಾ.ಜ್ಞಾನೇಶ್, ಸಂದೀಪ್ ಪೂಳಕಂಡ, ವಿನೋದ್ ಮೂಡಗದ್ದೆ, ಮೋಹನ್ ಪೊನ್ನಚ್ಚನ, ರಿಜಿಸ್ಟಾçರ್ ಚಿನ್ನಸ್ವಾಮಿ ಇತರರು ಉಪಸ್ಥಿತಿರಿದ್ದರು.

ಹೊಸೂರು ಸತೀಶ್ ಕುಮಾರ್ ಸ್ವಾಗತಿಸಿದರು. ದಿವಾಕರ್, ಪಟ್ಟಡ ಶಿವಕುಮಾರ್ ಮತ್ತು ಲತಾ ಕಾರ್ಯಕ್ರಮವನ್ನು ನಿರೂಪಿಸಿದರೆ, ಕುಯ್ಯಮುಡಿ ಮನೋಜ್ ವಂದಿಸಿದರು.

- ಸುನಿಲ್ ಕುಯ್ಯಮುಡಿ