ವಿ.ಪಿ. ಶಶಿಧರ್
ಕುಶಾಲನಗರ, ಏ. ೧೫: ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಣೆಯ ಸವಿನೆನಪಿಗಾಗಿ ಮಾಜಿ ಮುಖ್ಯಮಂತ್ರಿ ಆರ್ ಗುಂಡುರಾವ್ ಹೆಸರಿನಲ್ಲಿ ಅಂದಾಜು ೮ ಕೋಟಿ ರೂ. ವೆಚ್ಚದಲ್ಲಿ ಬೃಹತ್ ಸಭಾಂಗಣ ನಿರ್ಮಿಸಲು ಚಿಂತನೆ ಮಾಡಲಾಗಿದೆೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಸಂಚಾಲಕ ವಿ.ಪಿ. ಶಶಿಧರ್ ತಿಳಿಸಿದ್ದಾರೆ.
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ಪಾಲ್ಗೊಂಡ ಅವರು, ಶತಮಾನೋತ್ಸವ ಆಚರಣೆಯ ಸಂಭ್ರಮದ ಹೊಸ್ತಿಲಲ್ಲಿ ಇರುವ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ ಮಾಡುವ ಮೂಲಕ ಸದಸ್ಯರ ನೋಂದಾವಣೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.
ಸಾವಿರಾರು ಸಂಖ್ಯೆಯಲ್ಲಿರುವ ಹಿರಿಯ ವಿದ್ಯಾರ್ಥಿಗಳನ್ನು ಸಂಘಕ್ಕೆ ನೋಂದಾಯಿಸುವ ಪ್ರಕ್ರಿಯೆ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ಬೃಹತ್ ಸಭಾಂಗಣ ನಿರ್ಮಾಣ ಹಾಗೂ ನಂತರದ ನಿರ್ವಹಣೆ ಹಾಗೂ ಮತ್ತಿತರ ವಿಷಯಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಪ್ರತಿಯೊಬ್ಬರನ್ನು ಗುರುತಿಸಿ ಸಂಘಕ್ಕೆ ನೋಂದಾವಣೆ ಮಾಡುವಂತೆ ಕೋರಿದ ಅವರು ಪ್ರತಿಯೊಬ್ಬರು ಈ ಸಂಬAಧ ಕೈಜೋಡಿಸುವಂತೆ ಮನವಿ ಮಾಡಿದರು.
ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳ ನೇಮಕದ ಅಧಿಕಾರ ವನ್ನು ಪ್ರಸಕ್ತ ಸಂಚಾಲಕರಾಗಿರುವ ವಿ.ಪಿ. ಶಶಿಧರ್ ಅವರಿಗೆ ನೀಡಲು ಸಭೆ ಸರ್ವಾನುಮತದಿಂದ ಒಪ್ಪಿಗೆ ನೀಡಿತು.
ಈ ಸಂದರ್ಭ ಮಾತನಾಡಿದ ಹಿರಿಯ ವಿದ್ಯಾರ್ಥಿಗಳು ಹಾಗೂ ಸಂಘದ ಗೌರವಾಧ್ಯಕ್ಷರು ಆಗಿರುವ ಎಂ.ಹೆಚ್. ನಜೀರ್ ಅಹಮದ್, ಶಾಲೆಯ ಇತಿಹಾಸದ ಬಗ್ಗೆ ಮಾಹಿತಿ ಒದಗಿಸಿದರು.
ಶೀಘ್ರದಲ್ಲಿ ಶತಮಾನೋತ್ಸವ ಭವನ ನಿರ್ಮಾಣದ ಸಂಬAಧ ಕ್ರಿಯಾಯೋಜನೆ ರೂಪಿಸುವಂತೆ ಅವರು ಸಲಹೆ ನೀಡಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ಆರ್. ಕೆ. ನಾಗೇಂದ್ರ ಬಾಬು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿರಿಯ ವಿದ್ಯಾರ್ಥಿಗಳಾದ ಟಿ. ಆರ್. ಶರವಣ ಕುಮಾರ್, ಎಂ.ಕೆ ದಿನೇಶ್, ಎಂ.ಡಿ. ರಂಗಸ್ವಾಮಿ ಮತ್ತಿತರರು ಮಾತನಾಡಿ, ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.ಕ್ರಿಯಾಯೋಜನೆ ರೂಪಿಸುವಂತೆ ಅವರು ಸಲಹೆ ನೀಡಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ಆರ್. ಕೆ. ನಾಗೇಂದ್ರ ಬಾಬು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿರಿಯ ವಿದ್ಯಾರ್ಥಿಗಳಾದ ಟಿ. ಆರ್. ಶರವಣ ಕುಮಾರ್, ಎಂ.ಕೆ ದಿನೇಶ್, ಎಂ.ಡಿ. ರಂಗಸ್ವಾಮಿ ಮತ್ತಿತರರು ಮಾತನಾಡಿ, ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಪದಾಧಿಕಾರಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.