ಸೋಮವಾರಪೇಟೆ, ಏ. ೧೫: ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ತಾ. ೧೬ರಂದು (ಇಂದು) ಪತ್ರಿಕಾ ಭವನದಲ್ಲಿ ಸಂಜೆ ೪ ಗಂಟೆಗೆ ಅರಣ್ಯ ಇಲಾಖೆಯೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸಂಜೆ ೪ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ವಹಿಸಲಿದ್ದಾರೆ. ಶಾಸಕರಾದ ಡಾ. ಮಂತರ್ ಗೌಡ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ. ಅನಿಲ್ ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಡಿ.ಪಿ. ಲೋಕೇಶ್ ತಿಳಿಸಿದ್ದಾರೆ.