ಪೊನ್ನಂಪೇಟೆ, ಏ. ೧೫: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ ತಾ. ೧೭ ರಂದು ನಡೆಯಲಿದೆ.
ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೈಸೂರು- ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೊಡಗು ವಿಶ್ವವಿದ್ಯಾಲಯದ ಉಪ ಕುಲಪತಿ ಅಶೋಕ್ ಸಂಗಪ್ಪ ಆಲೂರ, ಕಾವೇರಿ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.