ಜಾತಿ ಗಣತಿ : ಅನ್ಯಾಯವಾಗಲು ಬಿಡುವುದಿಲ್ಲ ಎಂದ ಸಿಎಂ

ಕಲಬುರಗಿ, ಏ. ೧೬: ಹೆಚ್. ಕಾಂತರಾಜ ಅವರ ಆಯೋಗವು ರಾಜ್ಯದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ವರದಿ ಸಲ್ಲಿಸಿದೆ. ತಾ. ೧೭ ರಂದು ನಡೆಯುವ ಸಚಿವ ಸಂಪುಟದಲ್ಲಿ ಚರ್ಚೆ ನಡೆಯಲಿದೆ. ಇದರಿಂದ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗುವುದು. ಇದು ಜನಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೇ. ಆದರೂ, ಯಾರಿಗೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ಅಭಿಪ್ರಾಯಗಳನ್ನೂ ಆಲಿಸಲಾಗುವುದು ಎಂದು ಹೇಳಿದರು.

ಹಿಂದೂ ಟ್ರಸ್ಟ್ಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತೀರಾ? : ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ನವದೆಹಲಿ, ಏ. ೧೬: ೨೦೨೫ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಸ್ಲಿಮರನ್ನು ಹಿಂದೂ ಧಾರ್ಮಿಕ ಟ್ರಸ್ಟ್ಗಳ ಭಾಗವಾಗಲು ಅನುಮತಿ ನೀಡಲಾಗುತ್ತದೆಯೇ? ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ವಕ್ಫ್ ಮಸೂದೆ ವಿರುದ್ಧದ ಅರ್ಜಿಗಳ ವಿಚಾರಣೆ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್ಗೆ ರೂಪಿಸಲಾಗಿರುವ ನಿಯಮಗಳ ಕುರಿತು ಪ್ರಶ್ನಿಸಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರ ನೇಮಕಕ್ಕೆ ಅವಕಾಶ ನೀಡಿರುವುದು ಸಂವಿಧಾನದ ೨೬ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ? ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು ಇನ್ನು ಮುಂದೆ ಮುಸ್ಲಿಮರನ್ನು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ನೀವು ಅನುಮತಿಸುತ್ತೀರಾ? ಅನುಮತಿ ನೀಡುವುದಾದರೆ ಅದನ್ನು ಬಹಿರಂಗವಾಗಿ ಹೇಳಿ ಎಂದು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿತು.

ಹಿಂಸಾಚಾರ ವೇಳೆ ಲೈಂಗಿಕ ದೌರ್ಜನ್ಯ-ತನಿಖಾ ಸಮಿತಿ ರಚನೆ

ನವದೆಹಲಿ, ಏ. ೧೬: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬAಧ ತನಿಖೆ ಕೈಗೊಳ್ಳಲು ರಾಷ್ಟಿçÃಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ತನಿಖಾ ಸಮಿತಿಯನ್ನು ರಚಿಸಿದೆ. ಎನ್‌ಸಿಡಬ್ಲ್ಯೂ ಅಧ್ಯಕ್ಷೆ ವಿಜಯಾ ಕಿಶೋರ್ ರಹತ್ಕರ್ ಈ ಘಟನೆ ಸಂಬAಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಸಂತ್ರಸ್ತರನ್ನು ಭೇಟಿ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆಯಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಎನ್‌ಸಿಡಬ್ಲ್ಯೂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್‌ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್‌ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊAಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ಕೈಗೊಳ್ಳುವಂತೆ ತನಿಖಾ ಸಮಿತಿಯನ್ನು ಎನ್‌ಸಿಡಬ್ಲ್ಯೂ ರಚಿಸಿದೆ ಎಂದು ಹೇಳಿಕೆ ತಿಳಿಸಿದೆ.

ಕೇಂದ್ರ ಸರಕಾರ, ಇ.ಡಿ. ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ, ಏ. ೧೬: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿದAತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಆರೋಪಪಟ್ಟಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಜಾರಿ ನಿರ್ದೇಶನಾಲಯದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಎಐಸಿಸಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬAಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಏಪ್ರಿಲ್ ೯ ರಂದು ಆರೋಪಪಟ್ಟಿ ಸಲ್ಲಿಸಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಲ್ಲದೆ, ಆರೋಪಪಟ್ಟಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನೂ ಕೂಡ ಆರೋಪಿಗಳಾಗಿ ಹೆಸರಿಸಲಾಗಿದೆ. ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್‌ನ್ನು ಗುರಿಯಾಗಿಸುವ ಪ್ರಯತ್ನ ಎಂದು ಹೇಳಿದರು.

ಸುಪ್ರೀಂಕೋರ್ಟ್ ಸಿಜೆಐ ಸ್ಥಾನಕ್ಕೆ ಗವಾಯಿ ಹೆಸರು ಶಿಫಾರಸು

ನವದೆಹಲಿ, ಏ. ೧೬: ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸ್ಥಾನಕ್ಕೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಅವರ ಹೆಸರನ್ನು ಸಿಜೆಐ ನ್ಯಾ. ಸಂಜೀವ್ ಖನ್ನಾ ಅವರು ಶಿಫಾರಸು ಮಾಡಿದ್ದಾರೆ. ಸುಪ್ರೀಂಕೋರ್ಟ್ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ. ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ನ್ಯಾ. ಗವಾಯಿ ಅವರು ಮೇ ೧೪ ರಂದು ಸುಪ್ರೀಂಕೋರ್ಟ್ ೫೨ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಸಿಜೆಐ ಖನ್ನಾ ಅವರು ಮೇ ೧೩ ರಂದು ನಿವೃತ್ತಿಯಾಗುತ್ತಿದ್ದಾರೆ. ಮಹಾರಾಷ್ಟçದ ಅಮರಾವತಿ ಮೂಲದವರಾದ ಇವರು ೨೦೧೯ರಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ಎನ್‌ಕೌAಟರ್‌ನಲ್ಲಿ ಇಬ್ಬರು ನಕ್ಸಲರ ಹತ್ಯೆ

ರಾಯ್‌ಪುರ, ಏ. ೧೬: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಪೊಲೀಸರಿಗೆ ಬೇಕಾಗಿದ್ದ ಸಿಕ್ಕಿಬಿದ್ದರೆ ೧೩ ಲಕ್ಷ ರೂಪಾಯಿ ಸಾಮೂಹಿಕ ಬಹುಮಾನ ಘೋಷಣೆಯಾಗಿದ್ದ ಇಬ್ಬರು ನಕ್ಸಲರನ್ನು ಭದ್ರತಾ ಪಡೆಗಳು ಇಂದು ನಸುಕಿನ ಜಾವ ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ. ಮಂಗಳವಾರ ಸಂಜೆ ಕೊಂಡಗಾAವ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಕಿಲಾಮ್-ಬರ್ಗಮ್ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಸುಂದರರಾಜ್ ಪಿ. ತಿಳಿಸಿದ್ದಾರೆ. ಕೊಂಡಗಾAವ್‌ನಿAದ ರಾಜ್ಯ ಪೊಲೀಸರ ಎರಡೂ ಘಟಕಗಳಾದ ಜಿಲ್ಲಾ ಮೀಸಲು ಪಡೆ ಮತ್ತು ಬಸ್ತಾರ್ ಫೈಟರ್ಸ್ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಪೊಲೀಸ್ ಅಧಿಕಾರಿಗಳಿಗೆ ರೂ. ೫೦ ಸಾವಿರ ದಂಡ

ನವದೆಹಲಿ, ಏ. ೧೬: ಸಿವಿಲ್ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಬುಧವಾರ ರೂ. ೫೦ ಸಾವಿರ ದಂಡ ವಿಧಿಸಿದೆ. ಸಿಜೆಐ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಸಿವಿಲ್ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ತಪ್ಪು, ಈ ನಡೆ ಸ್ವೀಕಾರಾರ್ಹವಲ್ಲ ಎಂದಿದೆ. ಅಲ್ಲದೇ, ಸಿವಿಲ್ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣಗಳನ್ನಾಗಿ ಪರಿವರ್ತಿಸುತ್ತಿರುವುದನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗುತ್ತಲೇ ಇವೆ ಎಂದೂ ಕಳವಳ ವ್ಯಕ್ತಪಡಿಸಿದೆ. ಈ ಹಿಂದೆಯೂ ಸಿವಿಲ್ ಪ್ರಕರಣವೊಂದನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸಿದ್ದಕ್ಕೆ ಸಂಬAಧಿಸಿದAತೆ ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ನೆಲಕಚ್ಚಿದೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು.